ಬೆಂಗಳೂರು:
ಆಗಸ್ಟ್ 17 ಅಥವಾ 18ರಂದು ಯೋಜನೆಗೆ ಚಾಲನೆ ನೀಡಲಿದ್ದು, ಯೋಜನೆ ಜಾರಿಗಾಗಿ ಗ್ರಾಮಗಳಲ್ಲಿ ಪ್ರತಿನಿಧಿಗಳನ್ನು ನೇಮಕ ಮಾಡಲಾಗುವುದು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಕುರಿತಾಗಿ ಮಾಹಿತಿ ನೀಡಿದ್ದು, ಯಾವುದೇ ಗೊಂದಲಗಳಿಲ್ಲದೆ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆ ನಡೆಸಲಾಗಿದೆ.
3-4 ದಿನಗಳೊಳಗೆ ರೂಪುರೇಷೆ ಸಿದ್ಧಪಡಿಸಲಿದ್ದು, ಆಗಸ್ಟ್ 17 ಅಥವಾ 18ರಂದು ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಅಂತಿಮ ಗಡುವು ಇರುವುದಿಲ್ಲ. ಅರ್ಜಿ ಸಲ್ಲಿಕೆ ನಿರಂತರ ಪ್ರಕ್ರಿಯೆಯಾಗಿದೆ. ಪ್ರತಿ ಗ್ರಾಮದಲ್ಲಿಯೂ ಗೃಹಲಕ್ಷ್ಮಿ ಯೋಜನೆ ಯಶಸ್ವಿ ಅನುಷ್ಠಾನ ಉದ್ದೇಶದಿಂದ ಪ್ರಜಾಪ್ರತಿನಿಧಿ ಒಬ್ಬರನ್ನು ಒಳಗೂಡಿಸಲು ಚಿಂತನೆ ನಡೆಸಲಾಗಿದೆ. ಅವರ ಮೂಲಕ ಜಾಗೃತಿ ಮೂಡಿಸಿ ಅರ್ಜಿ ಸಲ್ಲಿಸುವಂತೆ ಮಾಡಲಾಗುವುದು. ಆ ವ್ಯಕ್ತಿಗೆ ಸರ್ಕಾರದಿಂದ ಇಂತಿಷ್ಟು ಸೇವಾ ಶುಲ್ಕ ಪಾವತಿಸಬೇಕೆಂಬ ಕುರಿತಾಗಿ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
