ಗುಬ್ಬಿ : ಮಾಸ್ಕ್ ಧರಿಸದ ಸಾರ್ವಜನಿಕರಿಗೆ ದಂಡದ ಎಚ್ಚರಿಕೆ

 ಗುಬ್ಬಿ : 

       ತಾಲ್ಲೂಕಿನಲ್ಲಿ ಕೊರೋನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಏ22 ರಂದು 138 ಕೊರೋನಾ ಪ್ರಕರಣಗಳು ದಾಖಲಾಗಿದ್ದು. ತಾಲ್ಲೂಕಿನ ಜನರಲ್ಲಿ ಆತಂಕ ಉಂಟಾಗಿದೆ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರಿಗೆ ಸಾಕಷ್ಟು ಬಾರಿ ಎಚ್ಚರಿಕೆ ಹಾಗೂ ಅರಿವನ್ನು ಮೂಡಿಸುತ್ತಿದ್ದರೂ ಸಾರ್ವಜನಿಕರು ಕೊರೋನ ನಿಯಮಗಳನ್ನು ಸರಿಯಾಗಿ ಪಾಲಿಸದೆ ಮಾಸ್ಕನ್ನು ಧರಿಸಲು ಹಿಂಜರಿಯುತ್ತಿರುವುದು ಕಂಡು ಬರುತ್ತಿದ್ದು. ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಸರ್ಕಾರದ ಮಾರ್ಗಸೂಚಿಯಂತೆ ಪಟ್ಟಣದಲ್ಲಿ ಅಂಗಡಿಗಳನ್ನು ಮುಚ್ಚಿಸುವಲ್ಲಿ ನಿರತರಾಗಿದ್ದಾರೆ.

      ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಧಿಕಾರಿಗಳು ಮತ್ತು ಪೊಲೀಸರು ಸಂಚಾರ ಮಾಡುತ್ತ ಸಾರ್ವಜನಿಕರಿಗೆ ಕೊರೋನಾದ ಬಗ್ಗೆ ಅರಿವನ್ನು ಮೂಡಿಸುವ ಜೊತೆಗೆ ಮಾಸ್ಕ್ ಧರಿಸದ ಸಾರ್ವಜನಿಕರಿಗೆ ದಂಡ ವಿಧಿಸಿ ಎಚ್ಚರಿಕೆಯನ್ನು ನೀಡಿದರು. ಕೊರೋನವನ್ನು ನಿಯಂತ್ರಿಸಿ ಹೋಗಲಾಡಿಸಲು ಎಲ್ಲಾ ಸಾರ್ವಜನಿಕರು ಸಹಕಾರ ನೀಡಬೇಕು ಕಡ್ಡಾಯವಾಗಿ ಮಾಸ್ಕ್ ಧರಿಸುವುದರ ಜೊತೆಗೆ ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಬೇಕು. ಆರೋಗ್ಯ, ಕಂದಾಯ, ಹಾಗೂ ಪೋಲೀಸ್ ಇಲಾಖೆಗಳ ಜೊತೆ ಇತರ ಇಲಾಖೆಯವರು ಕೈಜೋಡಿಸಿ ಸಹಕರಿಸಬೇಕು ಎಂದು ಪಟ್ಟಣ ಪಂಚಾಯ್ತಿ ಅಧಿಕಾರಿಗಳು ತಿಳಿಸಿದರು.

     ಸಾರ್ವಜನಿಕರು ಅನವಶ್ಯಕವಾಗಿ ಹೊರಗಡೆ ಓಡಾಡುವುದನ್ನು ನಿಲ್ಲಿಸಬೇಕು. ಜಾತ್ರೆ, ಸಂತೆ ಹಾಗೂ ಎಲ್ಲಾ ರೀತಿಯ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಈ ನಿಟ್ಟಿನಲ್ಲಿ ಸಹಕರಿಸಬೇಕು ಎಚ್ಚರಿಕೆಯಿಂದ ಇದ್ದು ಕೊರೋನಾವನ್ನು ಹೋಗಲಾಡಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.

      ಪಟ್ಟಣದಾಧ್ಯಂತ ಸರ್ಕಾರದ ಮಾರ್ಗಸೂಚಿಯಂತೆ ಬಟ್ಟೆ ಅಂಗಡಿ, ಜ್ಯುಯಲರಿ ಅಂಗಡಿ, ಬೀಡಾ ಅಂಗಡಿ, ಪ್ಯಾನ್ಸಿ ಸ್ಟೋರ್ಸ್, ಜ್ಯೂಸ್ ಅಂಗಡಿ, ಮೊಬೈಲ್ ಷಾಪ್, ಪೊಟೋ ಸ್ಟುಡಿಯೋಗಳು ಸೇರಿದಂತೆ ಸರ್ಕಾರದ ಮಾರ್ಗಸೂಚಿಯಂತೆ ಅಂಗಡಿಗಳನ್ನು ಸಂಪೂರ್ಣವಾಗಿ ಮುಚ್ಚಿಸಲಾಗಿದ್ದು ಕೊರೋನ ನಿಯಂತ್ರಣಕ್ಕೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap