ಗುಬ್ಬಿ :
ತಾಲ್ಲೂಕಿನಾದ್ಯಂತ ಕೊರೋನಾ ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಪಾಸಿಟೀವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಕಫ್ರ್ಯೂ ಎರಡನೆ ದಿನವಾದ ಇಂದು ಗುಬ್ಬಿ ಪಟ್ಟಣ ಸಂಪೂರ್ಣ ಸ್ಥಬ್ಧವಾಗಿತ್ತು. ವಾಹನ ಸಂಚಾರ ಸಂಪೂರ್ಣ ಸ್ಥಬ್ದವಾಗಿತ್ತು ಪಟ್ಟಣದಲ್ಲಿ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳಾದ ಹಾಲು, ಹಣ್ಣು, ತರಕಾರಿ, ದಿನಸಿ, ಕೃಷಿ, ಸಾಮಗ್ರಿಗಳ ಅಂಗಡಿಗಳು ತೆರೆದಿದ್ದವು. ತದನಂತರ ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚಿ ಸಂಪೂರ್ಣ ಕಫ್ರ್ಯೂ ವಾತಾವರಣ ಕಂಡು ಬಂದಿತು.
ಅಗತ್ಯ ಸಾಮಾಗ್ರಿಗಳನ್ನು ಸಾಗಿಸುವ ವಾಹನಗಳು ಸೇರಿದಂತೆ ಆಸ್ಪತ್ರೆಗೆ ತೆರಳುವ ದ್ವಿಚಕ್ರ ವಾಹನಗಳನ್ನು ಹೊರತು ಪಡಿಸಿದರೆ ಬೇರೆ ಯಾವುದೆ ವಾಹನಗಳು ಸಂಚರಿಸಲಿಲ್ಲ ಅನಗತ್ಯವಾಗಿ ಓಡಾಡುವ ವಾಹನಗಳ ವಿರುದ್ದ ಪೊಲೀಸರು ಸೂಕ್ತ ಕ್ರಮ ಕೈಗೊಂಡ ಹಿನ್ನಲೆಯಲ್ಲಿ ವಾಹನಗಳ ಓಡಾಟ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ತಾಲ್ಲೂಕಿನ ನಿಟ್ಟೂರು, ಕಡಬ, ಚೇಳೂರು, ಸಿ.ಎಸ್.ಪುರ, ಹಾಲವಾಡಿ ಸೇರಿದಂತೆ ಗ್ರಾಮೀಣ ಭಾಗಗಳಿಲ್ಲಿಯೂ ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟಿದ್ದು ವಾಹನ ಸಂಚಾರವೂ ಸಂಪೂರ್ಣ ಸ್ಥಗಿತವಾಗಿತ್ತು.
ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪೊಲೀಸ್ ಸಿಬ್ಬಂದಿ ಪಟ್ಟಣದ ಗಲ್ಲಿಗಲ್ಲಿಯಲ್ಲಿ ಗಸ್ತು ತಿರುಗುತ್ತಿದ್ದು ಕಂಡುಬಂದಿತು. ಆರೋಗ್ಯ ಇಲಾಖೆಯು ಹೈಅಲರ್ಟ್ ಆಗಿದ್ದು ಅವಿರತವಾಗಿ ಕಾರ್ಯನಿರ್ವಹಿಸುತ್ತಿದ್ದು ಕಂಡುಬಂತು. ಎಲ್ಲಾ ಕಡೆ ಬಿಗಿಬಂದೋಬಸ್ತ್ ಕಠಿಣಕ್ರಮ ದಿಂದಾಗಿ ಕಳೆದೆರಡು ದಿನಗಳಿಂದ ಕಫ್ರ್ಯೂ ಯಶಸ್ವಿ ಯಾಗಲು ಕಾರಣವಾಗಿದೆ.
ಕೊರೋನ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೊರೋನ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕಠಿಣ ನಿರ್ಧಾರಗಳನ್ನು ಸರ್ಕಾರವು ತೆಗೆದು ಕೊಳ್ಳಬೇಕಾದ ಅಗತ್ಯವಿದೆ ಈ ನಿಟ್ಟಿನಲ್ಲಿ ಸರ್ಕಾರ ಹಿಂಜರಿಯಬಾರದು ಎಂಬುದು ಪ್ರಜ್ಞಾವಂತ ಸಾರ್ವಜನಿಕರು ಅಭಿಪ್ರಾಯವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ