ಗುಬ್ಬಿ : ಸ್ಯಾನಿಟೈಸಿಂಗ್ ಸಿಂಪರಣಾ ಯಂತ್ರಕ್ಕೆ ಶಾಸಕ ಚಾಲನೆ

 ಗುಬ್ಬಿ :  

      ತಾಲ್ಲೂಕಿನಲ್ಲಿ ಕೋವಿಡ್ ಪಾಸಿಟೀವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಹೊರವಲಯದ ಹೇರೂರಿನಲ್ಲಿ 102 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‍ನ್ನು ಪ್ರಾರಂಭಿಸಲಾಗುತ್ತಿದ್ದು ರೋಗಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ತಾಲ್ಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ಸೂಕ್ತವಾದ ಕ್ರಮಗಳನ್ನು ಕೈಗೊಂಡಿವೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

     ತಾಲ್ಲೂಕಿನ ಹೇರೂರು ಗ್ರಾಮದಲ್ಲಿ ಪ್ರಾರಂಭಿಸಲಾಗುತ್ತಿರುವ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿ ಅಲ್ಲಿ ಸಿದ್ದತೆಗಳ ಬಗ್ಗೆ ಪರಿಸೀಲನೆ ನಡೆಸಿದ ನಂತರ ಮಾತನಾಡಿದ ಅವರು ಕೊರೋನ ಪಾಸಿಟೀವ್ ಪ್ರಕರಣಗಳು ಹೆಚ್ಚಾಗಿ ಪಟ್ಟಣ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿತ್ತು ಆದರೆ ಇದೀಗ ಗ್ರಾಮೀಣ ಭಾಗಗಳಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದು ರೋಗ ಹರಡದಂತೆ ಸಾರ್ವಜನಿಕರು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದರು.

      ಆರೋಗ್ಯ ಇಲಾಖೆ ಮತ್ತು ತಾಲ್ಲೂಕು ಆಡಳಿತ ಹಲವು ಹಂತದ ಕ್ರಮಗಳನ್ನು ಕೈಗೊಳ್ಳುತ್ತಿದೆ ಆದರೆ ಕೋವಿಡ್ ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಆರೋಗ್ಯ ಇಲಾಖೆ ಕೈಗೊಳ್ಳುತ್ತಿದೆ ಪ್ರಸ್ತುತ ತಾಲ್ಲೂಕಿನ ಹೇರೂರಿನಲ್ಲಿ ಪ್ರಾರಂಬಿಸಲಾಗುತ್ತಿರುವ ಕೋವಿಡ್ ಕೇರ್ ಸೆಂಟರ್‍ನಲ್ಲಿ ದಾಖಲಾಗುವ ಪಾಸಿಟೀವ್ ಪ್ರಕರಣದ ರೋಗಿಗಳನ್ನು ದಾಖಲು ಮಾಡಿಕೊಂಡು ಪ್ರತಿ ದಿನ ಸೂಕ್ತವಾದ ಚಿಕಿತ್ಸೆ ನೀಡುವುದರ ಜೊತೆಗೆ ರೋಗಿಯ ರೋಗ ಲಕ್ಷಣದ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತದೆ. ಎಂದು ತಿಳಿಸಿದ ಅವರು ಈಗಾಗಲೆ ಆರೋಗ್ಯ,ಕಂದಾಯ, ಇಲಾಖೆ ಸಿಬ್ಬಂದಿಗಳಿಗೆ ಸೂಕ್ತವಾದ ನಿರ್ದೇಶನಗಳನ್ನು ನೀಡಲಾಗಿದ್ದು ರೋಗ ಉಲ್ಬಣಗೊಳ್ಳದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

      ಪಟ್ಟಣ ಪಂಚಾಯ್ತಿಯಿಂದ ಎಲ್ಲಾ ಬಡಾವಣೆಗಳ ಚರಂಡಿಗಳಿಗೆ ಸ್ಯಾನಿಟೈಸಿಂಗ್ ಮಾಡಲಾಗುತ್ತಿದ್ದು ರೋಗ ಹರಡದಂತೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎಂದ ಅವರು ಸರ್ಕಾರ ಮುಂಚಿತವಾಗಿಯೆ ಸೂಕ್ತವಾದ ಕ್ರಮಗಳನ್ನು ಕೈಗೊಂಡಿದ್ದರೆ ರೋಗದ ಹೆಚ್ಚಳ ಈ ಮಟ್ಟಿಗೆ ಆಗುತ್ತಿರಲಿಲ್ಲ ಸಾರ್ವಜನಿಕರು ಈ ಸಂದರ್ಭದಲ್ಲಿ ಅಗತ್ಯ ಎಚ್ಚರಿಕೆ ವಹಿಸುವುದರ ಜೊತೆಗೆ ಸರ್ಕಾರದ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸುವ ಮೂಲಕ ರೋಗ ನಿಯಂತ್ರಣಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.

      ಇದೇ ಸಂದರ್ಭದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವೆಂಟಿಲೇಟರ್ ವಿಭಾಗವನ್ನು ಪರಿಸೀಲನೆ ನಡೆಸಿದರು. ನಂತರ ಪಟ್ಟಣ ಪಂಚಾಯ್ತಿಯಿಂದ ಚರಂಡಿಗಳಿಗೆ ಸ್ಯಾನಿಟೈಸಿಂಗ್ ಮಾಡುವ ಯಂತ್ರಕ್ಕೆ ಚಾಲನೆ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap