ಗುಬ್ಬಿ : ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆ ಸೌಲಭ್ಯವಿಲ್ಲದೆ ಗರ್ಭಿಣಿಯರ ಪರದಾಟ

ಗುಬ್ಬಿ :

      ಗುಬ್ಬಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ತಾಲ್ಲೂಕು ಮಟ್ಟದ ಆಸ್ಪತ್ರೆಯಾಗಿದ್ದು ಪ್ರಸ್ತುತ ಈ ಆಸ್ಪತ್ರೆಯನ್ನು 100 ಹಾಸಿಗೆಗಳಿಗೆ ಉನ್ನತೀಕರಿಸಲಾಗಿದೆ.  ಆದರೆ ಅಗತ್ಯವಿರುವ ವೈದ್ಯಕೀಯ ಉಪಕರಣಗಳು ಮತ್ತು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸಾರ್ವಜನಿಕರ ಆರೋಗ್ಯ ಸೇವೆಯನ್ನು ಉತ್ತಮ ರೀತಿಯಲ್ಲಿ ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎನ್ನುತ್ತಾರೆ ಸಾರ್ವಜನಿಕರು.

     ತಾಲ್ಲೂಕಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಜೊತೆಗೆ ಬೇರೆ ಬೇರೆ ಕಾಯಿಲೆಗಳು ಉಲ್ಬಣಗೊಳ್ಳುತ್ತಿರುವುದರಿಂದ ರೋಗಿಗಳ ಆರೈಕೆಗೆ ಸಾಕಷ್ಟು ಸಂಖ್ಯೆಯ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಇಲ್ಲದೆ ರೋಗಿಗಳು ತಾಲ್ಲೂಕು ಆಸ್ಪತ್ರೆಯಲ್ಲಿ ಪರದಾಡುವಂತಾಗಿದೆ. ಕೇವಲ ಒಬ್ಬರು ಮಾತ್ರ ಪಿಜಿಷಿಯನ್ ಇದ್ದು ಅವರೆ ಕೊರೋನಾ ರೋಗಿಗಳ ಜೊತೆಗೆ ಬೇರೆ ಬೇರೆ ಒಳ ಮತ್ತು ಹೊರ ರೋಗಿಗಳನ್ನು ನೋಡಿ ಕೊಳ್ಳ ಬೇಕಾಗಿರುವುದರಿಂದ ಒತ್ತಡದಲ್ಲಿಯೆ ಕಾರ್ಯ ನಿರ್ವಹಿಸುವಂತಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ದಿನ ದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಹೆಚ್ಚಿನ ವೈದ್ಯರನ್ನು ಹಾಗೂ ಅಗತ್ಯ ಇರುವ ಸಿಬ್ಬಂದಿಯನ್ನು ನೇಮಕ ಮಾಡಬೇಕಾದ ಅವಶ್ಯಕತೆ ಇದ್ದು ಸಂಬಂಧಿಸಿದ ಉನ್ನತ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆ ಹರಿಸುವತ್ತೆ ಮುಂದಾಗ ಬೇಕಿದೆ ಎನ್ನುತ್ತಾರೆ ಸಾರ್ವಜನಿಕರು.

    ಕೆಲವು ಆರೋಗ್ಯ ಸಿಬ್ಬಂದಿಗಳು ಓ.ಓ.ಡಿ. ಸೌಲಭ್ಯದ ಮೇಲೆ ಬೇರೆ ಆಸ್ಪತ್ರೆಗೆ ನಿಯೋಜನೆ ಗೊಂಡಿರುವುದರಿಂದ ಅವರನ್ನು ತಕ್ಷಣ ವಾಪಾಸ್ಸು ಕರೆಸಿ ಕೊಳ್ಳಬೇಕಾಗಿದೆ. ಕೇವಲ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿದರೆ ಸಾಕಾಗುವುದಿಲ್ಲ. ಜೊತೆಗೆ ಅಗತ್ಯ ವಿರುವಷ್ಟು ಸಿಬ್ಬಂದಿಯನ್ನು ಸಂಬಂಧಪಟ್ಟ ಮೇಲಾಧಿಕಾರಿಗಳು ಹಾಗೂ ಸರ್ಕಾರ ನೇಮಿಸಿಕೊಳ್ಳ ಬೇಕಾಗಿದೆ. ಇಲ್ಲವಾದಲ್ಲಿ ಉತ್ತಮವಾದ ಆರೋಗ್ಯ ಸೇವೆಯನ್ನು ಪಡೆಯಲು ಕಷ್ಟಕರ ವಾಗುತ್ತದೆ ಎನ್ನುತ್ತಾರೆ ಸಾರ್ವಜನಿಕರು.

      ಈ ಎಲ್ಲಾ ಸಮಸ್ಯೆಗಳಿಗಿಂತ ಮುಖ್ಯವಾಗಿ ತಾಲ್ಲೂಕು ಕೇಂದ್ರದಲ್ಲಿ ಇರಬೇಕಾಗಿದ್ದ ಹೆರಿಗೆ ಸೌಲಭ್ಯವನ್ನು ಕೋವಿಡ್ ಕಾರಣ ದಿಂದಾಗಿ ತಾತ್ಕಾಲಿಕವಾಗಿ ನಿಲುಗಡೆ ಮಾಡಿರುವುದು ಬಡ ಮತ್ತು ಸಾಮಾನ್ಯ ವರ್ಗದ ಗರ್ಭಿಣಿಯರು ಹೆರಿಗೆಗಾಗಿ ತುಮಕೂರು ಆಸ್ಪತ್ರೆಯನ್ನು ಅವಲಂಬಿಸಬೇಕಾಗಿರುವುದು ವಿಪರ್ಯಾಸದ ಸಂಗತಿ.

      ಪ್ರತ್ಯೇಕ ಹೆರಿಗೆ ಆಸ್ಪತ್ರೆ ನಿರ್ಮಾಣ ವಾಗುವವರೆಗೆ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಂಡು ಹೆರಿಗೆ ಸೇವೆಯನ್ನು ಒದಗಿಸುವುದು ಅಗತ್ಯವಾಗಿ ಕಂಡುಬರುತ್ತಿದೆ. ತಾಲ್ಲೂಕಿನ ಜನತೆಯ ಹಿತದೃಷ್ಟಿಯಿಂದ ಜನಪ್ರತಿನಿಧಿಗಳು ಈ ಆಸ್ಪತ್ರೆಗೆ ವಿಶೇಷ ಅನುದಾನವನ್ನು ನೀಡಿ ತುರ್ತಾಗಿ ಒಂದು ಸ್ಕೈನಿಂಗ್ ಯಂತ್ರವನ್ನು ಒದಗಿಸುವತ್ತೆ ಮುಂದಾಗಬೇಕಿದೆ ಎನ್ನುತ್ತಾರೆ ಸಾರ್ವಜನಿಕರು.

     ತಾಲ್ಲೂಕು ಮಟ್ಟದ ಆಸ್ಪತ್ರೆ ಯಾಗಿರುವುದರಿಂದ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಅಗತ್ಯವಿರುವ ಸೌಲಭ್ಯವನ್ನು ಒದಗಿಸುವುದರ ಜೊತೆಗೆ ವೈದ್ಯರು ಹಾಗೂ ಸಿಬ್ಬಂದಿಯ ಕೊರತೆಯನ್ನು ಹೋಗಲಾಡಿಸಿದಲ್ಲಿ ತಾಲ್ಲೂಕಿನ ಜನತೆಗೆ ಉತ್ತಮವಾದ ಆರೋಗ್ಯ ಸೇವೆಯನ್ನು ನೀಡಲು ನಾವು ಬದ್ಧರಾಗಿರುತ್ತೇವೆ ಎನ್ನುತ್ತಾರೆ ಇಲ್ಲಿನ ವೈದ್ಯರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link