ಗುಬ್ಬಿ : ಕೊರೋನ ನಿಯಂತ್ರಿಸಲು ಹೊಸ ಮಾರ್ಗಸೂಚಿ ಜಾರಿ!!

ಗುಬ್ಬಿ :

      ತಾಲ್ಲೂಕಿನಲ್ಲಿ ಕೊರೋನ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆಯ ಮೇರೆಗೆ ಹೊಸ ಮಾರ್ಗಸೂಚಿಯನ್ನು ಜಾರಿಗೆ ತರಲಾಗಿದೆ ಎಂದು ತಹಸೀಲ್ದಾರ್ ಡಾ.ಪ್ರದೀಪ್ ಕುಮಾರ್ ಹಿರೇಮಠ ತಿಳಿಸಿದರು.

     ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೊಸ ಮಾರ್ಗಸೂಚಿಯ ಪ್ರಕಾರ ಯಾವುದೇ ಗ್ರಾಮ ಅಥವಾ ಪಂಚಾಯಿತಿ ವ್ಯಾಪ್ತಿಯಲ್ಲಿ ಹತ್ತಕ್ಕಿಂತ ಕಡಿಮೆ ಸೋಂಕಿತರು ಕಂಡು ಬಂದಲ್ಲಿ ಅವರನ್ನು ಕಡ್ಡಾಯವಾಗಿ ಕೋವಿಡ್ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು. ಹತ್ತಕ್ಕಿಂತ ಹೆಚ್ಚಿನ ಪ್ರಕರಣಗಳು ಕಂಡು ಬಂದಲ್ಲಿ ಅಂತಹ ಗ್ರಾಮ ಅಥವಾ ಪಂಚಾಯಿತಿಗಳನ್ನು ಹಾಟ್‍ಸ್ಪಾಟ್ ಪ್ರದೇಶಗಳೆಂದು ಹಾಗೂ ಇಪ್ಪತ್ತಕ್ಕಿಂತ ಹೆಚ್ಚಿನ ಸೋಂಕಿತ ಪ್ರಕರಣಗಳು ಕಂಡುಬಂದಲ್ಲಿ ಕೆಂಪು ಪ್ರದೇಶಗಳೆಂದು (ರೆಡ್ ಜೋನ್) ಘೋಷಿಸಲಾಗುವುದು ಎಂದು ತಿಳಿಸಿದರು.

      ಹಾಟ್‍ಸ್ಪಾಟ್ ಹಾಗೂ ಕೆಂಪು ಪ್ರದೇಶಗಳನ್ನು ಕಂಟೋನ್ಮೆಂಟ್ ಪ್ರದೇಶವೆಂದು ಘೋಷಿಸಿ ಆ ಪ್ರದೇಶಗಳಲ್ಲಿ ಸೋಂಕಿತರ ಹಾಗೂ ಜನರ ಓಡಾಟವನ್ನು ಸಂಪೂರ್ಣವಾಗಿ ನಿಬರ್ಂಧಿಸಲಾಗುವುದು. ಮನೆಗಳಲ್ಲಿ ಪ್ರತ್ಯೇಕ ವಾಗಿರಲು ಸಾಧ್ಯವಿದ್ದಲ್ಲಿ ಅವರಿಗೆ ಅವಕಾಶ ಮಾಡಿಕೊಟ್ಟು ಪ್ರತ್ಯೇಕವಾಗಿ ಇರಲು ಸಾಧ್ಯವಿಲ್ಲದವರಿಗೆ ಕಡ್ಡಾಯವಾಗಿ ಆರೈಕೆ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

      ಸಾರ್ವಜನಿಕರು ಕಡ್ಡಾಯವಾಗಿ ಕೊರೋನಾದ ಎಲ್ಲಾ ನಿಯಮಗಳನ್ನು ಪಾಲಿಸುತ್ತಾ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಹಕಾರವನ್ನು ನೀಡಬೇಕು. ತಾಲ್ಲೂಕು ಆಡಳಿತದಿಂದ ಹಾಗೂ ಆರೋಗ್ಯ ಇಲಾಖೆಯಿಂದ ಅಗತ್ಯವಿರುವ ಎಲ್ಲ ಸಹಕಾರ ಹಾಗೂ ಔಷಧೋಪಚಾರಗಳನ್ನು ನೀಡಲಾಗುವುದು. ಯಾವುದೇ ಕಾರಣಕ್ಕೂ ಸಾರ್ವಜನಿಕರು ಭಯ ಮತ್ತು ಆತಂಕವನ್ನು ಬಿಟ್ಟು ಎಚ್ಚರಿಕೆಯಿಂದ ಇದ್ದು ಕೋರೋನವನ್ನು ನಿಯಂತ್ರಿಸಬೇಕು ಎಂದು ತಿಳಿಸಿದ ಅವರು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುತ್ತಾ ಎಲ್ಲ ಅಂಕಿ-ಅಂಶಗಳನ್ನ ತಾಲ್ಲೂಕು ಆಡಳಿತಕ್ಕೆ ನಿಖರವಾಗಿ ನೀಡಬೇಕು. ಯಾವುದೇ ಸೋಂಕಿತರು ಮನೆಯಿಂದ ಹೊರಗಡೆ ಬಾರದಂತೆ ಹಾಗೂ ಬೇರೆಯವರ ಸಂಪರ್ಕದಲ್ಲಿ ಇರದಂತೆ ನೋಡಿಕೊಳ್ಳಬೇಕಾಗಿರುವುದು ಸ್ಥಳೀಯ ಮಟ್ಟದ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಎಲ್ಲರೂ ಅವರವರ ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ನಿಬಾಯಿಸಬೇಕು ಎಂದು ತಿಳಿಸಿದರು.

ಈಗಾಗಲೇ ತಾಲ್ಲೂಕಿನ ಕಡಬ, ಹಾಗಲವಾಡಿ ಹಾಗೂ ಹೇರೂರಿನಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದ್ದು, ನಿಟ್ಟೂರು, ಚೇಳೂರು ಮತ್ತು ಸಿ.ಎಸ್.ಪುರಗಳಲ್ಲಿ ಶೀಘ್ರವಾಗಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆದು ಎಲ್ಲ ಸೋಂಕಿತರನ್ನು ಕಡ್ಡಾಯವಾಗಿ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link