ಗುಬ್ಬಿ:
ಕೊರೋನಾ ರೋಗವನ್ನು ಸಂಪೂರ್ಣವಾಗಿ ನಿಯಂತ್ರಿಸುವ ಸಲುವಾಗಿ ಪಟ್ಟಣದ ಎಲ್ಲಾ ಬಡಾವಣೆಗಳಿಗೂ ಟ್ಯಾಂಕರ್ ಮೂಲಕ ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ ತಿಳಿಸಿದರು.
ಪಟ್ಟಣದ ವಿವಿಧ ಬಡಾವಣೆಗಳಿಗೆ ಟ್ಯಾಂಕರ್ ಮೂಲಕ ಸ್ಯಾನಿಟೈಸ್ ಸಿಂಪರಣಾ ಕಾರ್ಯದಲ್ಲಿ ಭಾಗವಹಿಸಿ, ಸ್ವತಹ ತಾವೇ ಸ್ಯಾನಿಟೈಸರ್ ಸಿಂಪಡಿಸಿದ ಅವರು ಈಗಾಗಲೆ ಎರಡು ಭಾರಿ ಪಟ್ಟಣ ಪಂಚಾಯ್ತಿವತಿಯಿಂದ ಎಲ್ಲಾ ಬಡಾವಣೆಗಳಿಗೂ ಸ್ಯಾನಿಟೈಸ್ ಮಾಡಲಾಗಿದ್ದು ರೋಗ ನಿಯಂತ್ರಣಕ್ಕೆ ಬರುವವರೆಗೂ ನಿರಂತರವಾಗಿ ಸ್ಯಾನಿಟೈಸರ್ ಸಿಂಪರಣೆ ಮಾಡುವುದಾಗಿ ತಿಳಿಸಿದರು.
ಪಟ್ಟಣದ ಬಡಾವಣೆಗಳ ಚರಂಡಿ ಸ್ವಚ್ಚತೆ ಮತ್ತು ಕಸ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ರೋಗ ಹರಡದಂತೆ ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಪಟ್ಟಣದ ಎಲ್ಲಾ ಬಡಾವಣೆಗಳಿಗೂ ಸ್ಯಾನಿಟೈಸರ್ ಮಾಡಲಾಗುತ್ತಿದೆ ಎಂದರು.
ರೋೀಗದ ತೀವ್ರತೆಗೆ ಕಡಿವಾಣ ಹಾಕಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸದಸ್ಯರಾದ ಜಿ.ಆರ್.ಶಿವಕುಮಾರ್, ಜಯಲಕ್ಷ್ಮೀಕುಮಾರ್, ಮುಖ್ಯಾಧಿಕಾರಿ ಯೋಗೇಶ್ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
