ಮಧುಗಿರಿ : ವಸತಿ ನಿಲಯಕ್ಕೆ ಭೇಟಿ ನೀಡಿದ ರಾಜೇಂದ್ರ ರಾಜಣ್ಣ

ಮಧುಗಿರಿ :

     ಸುಮಾರು 2 ಕೋಟಿ 20ಲಕ್ಷ ರೂ ವೆಚ್ಚದ ಅಲ್ಪಸಂಖ್ಯಾತರ ವಿದ್ಯಾರ್ಥಿ ಗಳ ವಸತಿ ನಿಲಯ ಕಟ್ಟಡ ನಿರ್ಮಾಣ ಕ್ಕೆ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಗುದ್ದಲಿ ಪೂಜೆ ನೇರವೇರಿಸಿದರು.

     ಪಟ್ಟಣದ ಪ್ರವಾಸಿ ಮಂದಿರದ ಹಿಂಭಾಗದಲ್ಲಿ ವಸತಿ ನಿಲಯ ನಿರ್ಮಾಣ ವಾಗಲಿದ್ದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಸರ್ಕಾರ ವು ಪೂರಕವಾಗಿ ಸ್ಪಂದಿಸುತ್ತಿದೆ ಎಂದರು.

    ಸಮೀಪದಲ್ಲಿಯೇ ಇದ್ದ ಎಸ್ ಟಿ ವಿದ್ಯಾರ್ಥಿ ನಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಸ್ವಚ್ಚತೆಯ ಬಗ್ಗೆ ಪರಿಶೀಲಿಸಿ ಮಕ್ಕಳಿಗೆ ಗುಣಮಟ್ಟದ ಆಹಾರ ಸೇರಿದಂತೆ ಮತ್ತಿತರ ಸೌಕರ್ಯಗಳನ್ನು ಒದಗಿಸುವಂತೆ ವಾರ್ಡನ್ ರವರಿಗೆ ಸೂಚಿಸಿದರು.

     ನಂತರ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಬರಗಾಲದ ಬಗ್ಗೆ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದರು.ತಾ.ಪಂ ಇಓ ಲಕ್ಷಣ್ ಎಡಿಓ ಮಧುಸೂಧನ್ , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಯರಾಮಯ್ಯ , ಪುರಸಭಾ ಸದಸ್ಯ ಲಾಲಪೇಟೆ ಮಂಜುನಾಥ್ , ಆಚಾರ್ ಮಂಜುನಾಥ್ , ಸಾಧಿಕ್ ಮುಖಂಡರಾದ ಎಸ್ ಕೆ ಸೈಯದ್ , ನವಾಬ್ ಮತ್ತಿತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap