IPL 2022 :
ಇಂಡಿಯನ್ ಪ್ರೀಮಿಯರ್ ಲೀಗ್ 2022ರಲ್ಲಿ (IPL 2022) 20ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಗುಜರಾತ್ ಟೈಟನ್ಸ್ (SRH vs GT) ತಂಡವನ್ನು ಎದುರಿಸಲಿದೆ. ಕೇನ್ ವಿಲಿಯಮ್ಸನ್ (Kane Williamson) ನಾಯಕತ್ವದ ಹೈದಾರಾಬಾದ್ ತಂಡವು ಮೂರು ಪಂದ್ಯಗಳಲ್ಲಿ ಕೇವಲ 1 ಪಂದ್ಯವನ್ನು ಗೆದ್ದಿದೆ.
ಆದರೆ ಹಾರ್ಧಿಕ್ ಪಾಂಡ್ಯ (Hardik Pandya) ನೇತೃತ್ವದ ಗುಜರಾತ್ ಟೈಟನ್ಸ್ ತಂಡವು ಈ ಬಾರಿ ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ತೋರಿದೆ. ಈವರೆಗೆ ಗುಜರಾತ್ ತಂಡವು ಆಡಿರುವ 3 ಪಂದ್ಯಗಳಲ್ಲಿ ಗೆದ್ದು ಐಪಿಎಲ್ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇನ್ನು, ಈ ಪಂದ್ಯವು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬ ಅಂಕಿಅಂಶ ನೋಡುವುದಾದರೆ ಈ ಕೆಳಗಿನಂತಿದೆ.
ರಾಮನವಮಿ ದಿನವೇ ಶ್ರೀರಾಮನ ಭಕ್ತರಿಗೆ ಸಿಹಿ ಸುದ್ದಿ: ಡಿ. 2023 ರೊಳಗೆ ಅಯೋಧ್ಯೆ ರಾಮಮಂದಿರ ಕಾಮಗಾರಿ ಪೂರ್ಣ
ಪಂದ್ಯದ ವಿವರ:
ಇಂದಿನ ಮೊದಲ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ. ಪಂದ್ಯವು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ.
ಐಪಿಎಲ್ 2022 ರಲ್ಲಿ ಉಭಯ ತಂಡಗಳ ಪ್ರದರ್ಶನ:
ಈವರೆಗೆ ಸನ್ ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ನಲ್ಲಿ 3 ಪಂದ್ಯಗಳಲ್ಲಿ ಕೇವಲ 1 ಪಂದ್ಯವನ್ನು ಗೆದ್ದು 2 ಪಂದ್ಯಗಳನ್ನು ಸೋಲುವ ಮೂಲಕ ಈ ಐಪಿಎಲ್ 2022ರ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಆದರೆ ಗುಜರಾತ್ ಟೈಟನ್ಸ್ 3 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಹೀಗಾಗಿ ಉಭಯ ತಂಡಗಳ ಬಲಾಬಲ ನೋಡುವುದಾದರೆ ಹೈದರಾಬಾದ್ ತಂಡಕ್ಕಿಂತ ಗುಜರಾತ್ ತಂಡವು ಹೆಚ್ಚು ಬಲಿಷ್ಠವಾಗಿ ಕಾಣುತ್ತಿದೆ.
SRH vs GT ಹೆಡ್ ಟು ಹೆಡ್:ಗುಜರಾತ್ ಟೈಟಾನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ 2022 ರಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಲಿದೆ. ಹೀಗಾಗಿ ಈ ತಂಡಗಳು ಮೊದಲಿನ ಅಂಕಿಅಂಶವನ್ನು ಇಲ್ಲಿ ಗಮನಿಸಬೇಕಾಗುತ್ತದೆ.
SRH ತಂಡವು ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದಾಗ ಸರಾಸರಿ 150ರಿಂದ 170 ರನ್ ಗಳಿಸಿದರೆ, ಗುಜರಾತ್ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 170ರಿಂದ 190 ರನ್ ಗಳಸಿಉವ ಮೂಲಕ ಇಲ್ಲಿಯೂ ಬಲಿಷ್ಠವಾಗಿದೆ ಎಂದು ಹೇಳಬಹುದಾಗಿದೆ.
ಉಭಯ ತಂಡಗಳ ಆಟಗಾರರ ಪ್ರದರ್ಶನ:
ಹೈದರಾಬಾದ್ ತಂಡದಲ್ಲಿ ಪ್ರಮುಖವಾಗಿ ಅಭಿಷೇಕ್ ಶರ್ಮಾ 3 ಪಂದ್ಯದಲ್ಲಿ 97 ರನ್ ಗಳಿಸಿದರೆ, ಬೌಲಿಂಗ್ ನಲ್ಲಿ ಟಿ ನಟರಾಜನ್ 3 ಪಂದ್ಯಗಳ ಮೂಲಕ 6 ವಿಕೆಟ್ ಪಡೆದು ಕೀ ಪ್ಲೇಯರ್ಸ್ ಆಟಗಾರರಾಗಿ ಕಾಣಿಸಕೊಂಡಿದ್ದಾರೆ.
ಅದರಂತೆ ಗುಜರಾತ್ ತಂಡದಲ್ಲಿ ಶುಭಮನ್ ಗಿಲ್ 3 ಪಂದ್ಯಗಳಿಂದ 180 ರನ್ ಹಾಗೂ ಬೌಲಿಂಗ್ ನಲ್ಲಿ ಮೊಹಮ್ಮದ್ ಶಮಿ 3 ಪಂದ್ಯಗಳಲ್ಲಿ 6 ವಿಕೆಟ್ ಪಡೆದು ಪ್ರಮುಖ ಆಟಗಾರರಾಗಿದ್ದಾರೆ. ಈ ಆಟಗಾರರ ಮೇಲೆ ಹೆಚ್ಚು ನಿರೀಕ್ಷೆಯಿದೆ.
ಉಭಯ ತಂಡಗಳ ಸಂಭಾವ್ಯ ತಂಡ:ಸನ್ ರೈಸರ್ಸ್ ಹೈ ದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ , ರಾಹುಲ್ ತ್ರಿಪಾಠಿ, ಐಡೆನ್, ಮಾರ್ಕ್ರಾಮ್, ನಿಕೋಲಸ್ ಪೋರನ್, ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಯಾನ್ಸನ್, ಉಮ್ರಾನ್ ಮಲಿಕ್, ಟಿ ನಟರಾಜನ್.
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ರಹಮಾನು ಲ್ಲಾಗುರ್ಬಾಜ್, ಶುಭಮನ್ ಗಿಲ್, ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲಾಕ್ ಫರ್ಗುಸನ್, ಮೊಹಮ್ಮದ್ ಶಮಿ, ದರ್ಶನ್ ನಲ್ಕಂ ಡೆ.
ಸತತ 4 ಪಂದ್ಯ ಸೋತ ಮುಂಬೈ ಇಂಡಿಯನ್ಸ್ ತಂಡಕ್ಕೆ ನೀತಾ ಅಂಬಾನಿಯಿಂದ ವಿಶೇಷ ಸಂದೇಶ
![](https://prajapragathi.com/wp-content/uploads/2022/04/Capture-112.jpg)