ಮಧುಗಿರಿ :
ನಿರಂತರವಾಗಿ ಸರಗಳ್ಳತನ ಮಾಡುತ್ತಿದ್ದ ಆರೋಪಿ ಕಾಲಿಗೆ ಗುಂಡೇಟು ಹೊಡೆದ ಮಧುಗಿರಿ ಪೊಲೀಸರು.ಆಂಧ್ರಪ್ರದೇಶದ ಹಿಂದೂಪುರ ಮೂಲದ ರಿಜ್ವಾನ್ ಎಂಬಾತನ ಎಡಗಾಲಿಗೆ ಗುಂಡೇಟು ಹಾರಿಸಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಈಜೀಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ.
ಒಟ್ಟು 15 ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ರಿಜ್ವಾನ್. ಕಳೆದ ಒಂದು ವಾರದ ಹಿಂದೆ ಎ1 ಆರೋಪಿ ಚಿನ್ನಾ ಎಂಬಾತನನ್ನ ಬಂಧಿಸಿದ್ದ ಪೊಲೀಸರು.
ಇಂದು ಖಚಿತ ಮಾಹಿತಿ ಮೇರೆಗೆ ಎ2 ಆರೋಪಿ ರಿಜ್ವಾನ್ ನನ್ನ ಬಂಧಿಸಲು ಪೊಲೀಸರು ತೆರಳಿದ್ದರು. ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ,ಸಿಪಿಐ ಹನುನಂತರಾಯಪ್ಪ, ಪಿಎಸ್ ಐ ಶ್ರೀನಿವಾಸ್, ದಾದಪೀರ್, ಹಾಗೂ ಪೊಲೀಸ್ ಸಿಬ್ಬಂದಿ ರಮೇಶ್ ತಂಡ ತೆರಳಿತ್ತು.
ಈ ವೇಳೆ ಪೊಲೀಸ್ ಪೇದೆ ರಮೇಶ್ (30)ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿದ್ದು ಇತನನ್ನು ಜೀಪನಲ್ಲಿ ಕರೆ ತರುವಾಗ ಮೂತ್ರ ವಿಸರ್ಜನೆ ಮಾಡಬೇಕೆಂದು ಹೇಳಿ ಇಳಿಯುವಾಗ ಪರಾರಿಯಾಗಲು ಯತ್ನಿಸಿ ಸಮೀಪದಲ್ಲಿದ್ದ ಬಾಟಲ್ ನಿಂದ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ್ದಾನೆ.
ಕೂಡಲೇ ಆರೋಪಿಯನ್ನು ಶರಣಾಗುವಂತೆ ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು.ಸದ್ಯ ಗಾಯಾಳು ಪೊಲೀಸ್ ಸಿಬ್ಬಂದಿ ರಮೇಶ್ ಗೆ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಯ ಪಡೆಯುತ್ತಿದ್ದು ಎ ಎಸ್ ಪಿ ಮರಿಯಪ್ಪ ಆಸ್ಪತ್ರೆ ಭೇಟಿ ಸಿಬ್ಬಂದಿ ಆರೋಗ್ಯ ವಿಚಾರಿಸಿದರು.
ಆರೋಪಿ ರಿಜ್ವಾನ್ (38) ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು.
ಒಟ್ಟು 15 ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದು ಮಧುಗಿರಿಯ 3, ಮಿಡಗೇಶಿ 4, ಬಡವನಹಳ್ಳಿ 2, ಕೊರಟಗೆರೆ 1, ಕೊಡಿಗೇನಹಳ್ಳಿ 2 ಮಡಕಶಿರಾ 1, ಪಟ್ಟನಾಯಕನಹಳ್ಳಿ 2, ಗೌರಿಬಿದನೂರು 1 ಸೇರಿದಂತೆ ಹಲವು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ದಾಖಲಾಗಿರುವ ದೂರು.ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
