ಬೆಂಗಳೂರು:
ಇತ್ತೀಚೆಗೆ ಸಂಸದರಾಗಿ ಆಯ್ಕೆಯಾಗಿ ಕೇಂದ್ರಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಎಚ್.ಡಿ. ಕುಮಾರಸ್ವಾಮಿ ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಅವರು ಸಂಸದ ಸ್ಥಾನ ಉಳಿಸಿಕೊಳ್ಳಲು ನಿರ್ಧರಿಸಿದ್ದು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಮುಕ್ತಾಯವಾದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್ ಡಿ ಕುಮಾರಸ್ವಾಮಿ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.