ಗದಗ:
ಗದಗ ನಗರದ ದಾಸರ ಓಣಿಯಲ್ಲಿ ಈ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರು ಕೊಲೆಯಾಗಿದ್ದಾರೆ.ಮೃತರು ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ 27,
ಪರಶುರಾಮ 55, ಪತ್ನಿ ಲಕ್ಷ್ಮೀ 45, ಪುತ್ರಿ ಆಕಾಂಕ್ಷಾ 16 ಇವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳ ಕೊಲೆಯಾಗಿದ್ದು, ಈ ಮೂವರು ಕೊಪ್ಪಳ ಮೂಲದವರಾಗಿದ್ದಾರೆ.
ಈ ಕುರಿತು ಮನೆ ಮಾಲೀಕ ಪ್ರಕಾಶ್ ಬಾಕಳೆ ಹೇಳಿಕೆ ನೀಡಿ, ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಸಂಬಂಧಿಗಳು ಆಗಮಿಸಿದ್ದರು ಯಾರೋ ಬಂದು ಮಾಡಿದ್ದು ಕುಟುಂಬಸ್ಥರು ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಫೋನ್ ಮಾಡಿದ್ದಾರೆ ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆಯೇ ದುಷ್ಕರ್ಮಿಗಳು ಎಸ್ಕೇಪ್ ಆಗುದ್ದಾರೆ ಬಾಗಿಲು ತೆಗೆದಿದ್ದರೆ ನಮ್ಮನ್ನು ಕೊಲೆ ಮಾಡುತ್ತಿದ್ದರು ಕೊಲೆಗಾರರಿಗೆ ಗಲ್ಲು ಶಿಕ್ಷೆ ಕೊಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಕೊಲೆಯಾದ ಸ್ಥಳಕ್ಕೆ ಸಚಿವ ಎಚ್ ಕೆ ಪಾಟೀಲ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ
ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಮನೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ, ಕಾನೂನು, ನ್ಯಾಯ, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ಅವರು ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಸಚಿವರ ಮುಂದೆ ಅಳಲು ತೋಡಿಕೊಂಡ ಕುಟುಂಬಸ್ಥರು, ಆರೋಪಿಗಳನ್ನು ಬೇಗ ಪತ್ತೆ ಹಚ್ಚುವಂತೆ ಎಸ್.ಪಿ ಅವರಿಗೆ ಹೇಳಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.
ನಂತರ ಮಾತನಾಡಿದ ಸಚಿವರು ಇದೊಂದು ದುರ್ಧೈವದ ಸಂಗತಿ, ಅಮಾನುಷ ಘಟನೆ ದುಷ್ಕರ್ಮಿಗಳು ಮನುಷ್ಯರ ಹಾಗೇ ವರ್ತನೆ ಮಾಡಿಲ್ಲಾ ಪೊಲೀಸ್ ತನಿಖೆ ಮಾಡುತ್ತಿದ್ದಾರೆ. ಕೊಲೆಗಡುಕರ ಪತ್ತೆಗೆ ಅಗತ್ಯ ಕ್ರಮದ ಭರವಸೆ ನೀಡಿದರು.
ಘಟನಾ ಸ್ಥಳಕ್ಕೆ ಉತ್ತರ ವಲಯ ಐಜಿಪಿ ವಿಕಾಸಕುಮಾರ ವಿಕಾಸ್ ಭೇಟಿ ಕೊಲೆಯಾದ ಸ್ಥಳ ಪರಿಶೀಲನೆ ನಡೆಸಿ, ಗದಗ ಎಸ್ಪಿ ಬಿ ಎಸ್ ನೇಮಗೌಡ ಅವರಿಂದ ಮಾಹಿತಿ ಕಲೆ ಹಾಕಿದರು.
ಎಸ್ಪಿ ಬಿ ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಎಸ್ಪಿ ಬಿ.ಎಸ್. ನೇಮಗೌಡ ಪ್ರತಿಕ್ರಿಯಿಸಿ ಮಧ್ಯರಾತ್ರಿ ನಾಲ್ಕು ಜನರಾದ ಪ್ರಕಾಶ ಬಾಕಳೆ ಮಗ ಕಾರ್ತಿಕ್, ಸಂಬಂಧಿಕರಾದ ಪರಶುರಾಮ್, ಲಕ್ಷ್ಮೀ, ಆಕಾಂಕ್ಷಾ ಹತ್ಯೆ ಆಗಿದೆ.
ಕುಟುಂಬಸ್ಥರು ಹೇಳುವ ಪ್ರಕಾರ ರಾತ್ರಿ 2 ರಿಂದ 3 ಗಂಟೆ ಆಗಿದೆ ಎನ್ನಲಾಗಿದ್ದು, ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವುದು ಕಂಡು ಬರುತ್ತಿದೆ. ಯಾರು ಎಂಬುದು ಗೊತ್ತಾಗಿಲ್ಲ. ಪರಿಶೀಲನೆ ಮುಂದುವರೆದಿದೆ ಆದಷ್ಟು ಬೇಗ ದಸ್ತಗಿರಿ ಮಾಡುತ್ತೇವೆ. ಕುಟುಂಬಸ್ಥರು ಹೇಳುವ ಪ್ರಕಾರ ರಾತ್ರಿ ಬಾಗಿಲು ಬಡೆದರೂ ತೆಗೆದಿಲ್ಲ. ಆದರೆ ಹೊರಗಡೆ ಬಂದು ನೋಡಿದಾಗ 2 ರೂಮ್ ನಲ್ಲಿ ಹತ್ಯೆ ಆಗಿತ್ತು.ಈ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಮಹಡಿನಿಂದ ಬಂದಿದ್ದಾರೆ ಎನ್ನಲಾಗುತ್ತಿದ್ದು, ಪರಿಶೀಲನೆ ಮಾಡುತ್ತಿದ್ದೇವೆ ಎಂದರು.