5 ಮಸೂದೆಗಳ ಅನುಮೋದನೆಗಾಗಿ ರಾಜ್ಯಪಾಲರಿಗಾಗಿ ಮತ್ತೊಮ್ಮೆ ರವಾನೆ : ಎಚ್‌ ಕೆ ಪಾಟೀಲ್‌

ಬೆಂಗಳೂರು:

   ಅನುಮೋದನೆಗಾಗಿ 5 ಮಸೂದೆಗಳನ್ನು ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಮತ್ತೊಮ್ಮೆ ಕಳುಹಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್‌ ಅವರು ಗುರುವಾರ ಹೇಳಿದರು.

   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಸ್ಪಷ್ಟನೆ ಕೋರಿ ಹನ್ನೊಂದು ವಿಧೇಯಕಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ಕರ್ನಾಟಕ ವಿಧಾನ ಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ ಸಂಖ್ಯೆ 26, 2024″ನ್ನು ಮುಂಬರುವ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಹಿಂಪಡೆಯಲು ಮತ್ತು ವಿಧಾನಸಭೆಯ ವಿಧೇಯಕ 27ಕ್ಕೆ ಒಪ್ಪಿಗೆ ನೀಡುವಂತೆ ರಾಜ್ಯಪಾಲರನ್ನು ಕೋರಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.

   ಈ ಸಂಬಂಧ ಬಿಲ್ ನ್ನು ರಾಜ್ಯಪಾಲರು ವಾಪಸು ಕಳಹಿಸಿದ್ದರು. ಅವರು ತಮ್ಮ ಆಕ್ಷೇಪಣೆಯಲ್ಲಿ ಈ ಸಂಬಂಧ ಈಗಾಗಲೇ ಮಸೂದೆ ಇದ್ದರೂ, ಮತ್ತೊಂದು ಮಸೂದೆ ಅಗತ್ಯತೆಯ ಬಗ್ಗೆ ಸ್ಪಷ್ಟೀಕರಣ ಕೇಳಿದ್ದರು. ಅದರ ಆಧಾರದಲ್ಲಿ ಹಿಂದಿನ ಮಸೂದೆಯನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ. ಕರ್ನಾಟಕ ವಿಧಾನ ಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ, 2024ವನ್ನು ರಾಜ್ಯಪಾಲರಿಗೆ ಕಳುಹಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

  11 ಬಿಲ್ ಗಳನ್ನು ರಾಜ್ಯಪಾಲರು ವಾಪಾಸು ಮಾಡಿದ್ದರು. ಆ ಪೈಕಿ ಐದು ಬಿಲ್ ಗಳಿಗೆ ಉತ್ತರ ನೀಡಿದ್ದೇವೆ. ಆರು ಬಿಲ್ ಗಳ ಪೈಕಿ ಒಂದು ಬಿಲ್ ನ್ನು ಇಂದು ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದೇವೆ. ಉಳಿದ ಬಿಲ್ ಗಳ ಬಗ್ಗೆ ಮುಂದಿನ ದಿನ ವಿವರಣೆ ನೀಡಿ ರಾಜ್ಯಪಾಲರಿಗೆ ಕಳುಹಿಸುತ್ತೇವೆ ಎಂದು ಹೇಳಿದರು.

Recent Articles

spot_img

Related Stories

Share via
Copy link
Powered by Social Snap