ಹಗರಣಗಳ ಸುಳಿಯಲ್ಲಿ ಸಿಲುಕಿದ ಕೇಂದ್ರ ಸರ್ಕಾರ ಸಭ್ಯತೆಯ ಸೋಗು ತೋರುತ್ತಿದೆ

ತುಮಕೂರು

     ಲೋಕಸಭಾ ಚುನಾವಣೆಯಲ್ಲಿ ನೀಡಿದ ಆಶ್ವಾಸನೆಗಳನ್ನು ಗಾಳಿಗೆ ತೂರಿ ದಿನಬಳಕೆ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳ ಕೂಗುತ್ತಾ ಜಿಲ್ಲಾ ಕಾಂಗ್ರೆಸ್ ಸಮಿತಿಯು ಮುಷ್ಕರ ನಡೆಸಿತು.

     2014ರ ಲೋಕಸಭಾ ಚುನಾವಣೆಯಲ್ಲಿ ಅನೇಕ ಆಶ್ವಾಸನೆಗಳನ್ನು ನೀಡಿದ್ದ ಬಿಜೆಪಿ ಸರ್ಕಾರ ಅವುಗಳನ್ನು ಈಡೇರಿಸದೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರೂಪಾಯಿಯ ಮೌಲ್ಯ ಕುಸಿದಿದೆ. ರಫೇಲ್ ಯುದ್ಧವಿಮಾನಗಳ ಹಗರಣ ಸಾಕಷ್ಟು ರಹಸ್ಯಗಳನ್ನು ಒಳಗೊಂಡಿದೆ. ಇಡೀ ಒಪ್ಪಂದವು ತುರಾತುರಿಯಲ್ಲಿ ನಡೆದಿದೆ. ಈ ಬಗೆಗಿನ ವಿವವರಗಳನ್ನು ಹಂಚಿಕೊಳ್ಳಲು ಕೇಂದ್ರ ಸರ್ಕಾರ ನಿರಾಕರಿಸುತ್ತಿದೆ. ಇದು ಕೇಂದ್ರ ಸರ್ಕಾರ ರಫೇಲ್ ಹಗರಣದಲ್ಲಿ ಭಾಗಿಯಾಗಿದೆ ಎನ್ನುವುದಕ್ಕೆ ಪೂರಕವಾದಂತಿದೆ. ಕಪ್ಪು ಹಣದ ಮೇಲಿನ ಆಶ್ವಾಸನೆ ಈಡೇರಿಕೆಯಾಗಿಲ್ಲ. ದೇಶದ ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಖಾತೆಗೆ 15 ಲಕ್ಷ ರೂ.ಗಳನ್ನು ಹಾಕುವ ಯೋಜನೆ ಇಂದಿದೂ ಸಫಲವಾಗಿಲ್ಲ ಎಂದು ಆರೋಪ ಮಾಡಿದೆ.

       ದೇಶದ ಬೆನ್ನೆಲುಬು ರೈತ ಎಂದು ಹೇಳುವ ಕೇಂದ್ರ ಸರ್ಕಾರ ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಲ್ಲಿ ವಿಫಲವಾಗಿದೆ. ಸಬ್‍ಕಾ ಸಾತ್ ಸಬ್‍ಕಾ ವಿಕಾಸ್ ಎಂದು ಘೋಷಣೆ ಮಾಡುತ್ತಿದೆ. ಆದರೆ ಇದರಿಂದ ರೈತನಿಗೆ ಯಾವುದೇ ರೀತಿಯಲ್ಲಿ ಅನುಕೂಲವಾಗುತ್ತಿಲ್ಲ. ದೇಶ ಕಂಡ ಭ್ರಷ್ಟ ಕೈಗಾರಿಕೋದ್ಯಮಿ ವಿಜಯ್ ಮಲ್ಯ ಹಾಗೂ ನೀರವ್ ಮೋದಿ ದೇಶದಿಂದ ಪಲಾಯನ ಮಾಡಿದರೂ ಈವರೆಗೂ ಅವರನ್ನು ಬಂಧಿಸಲು ಸಾಧ್ಯವಾಗಲಿಲ್ಲ. ಯುವಕರಿಗೆ ಉದ್ಯೋಗ ದೊರಕಿಸುವ ಹೇಳಿಕೆಗಳನ್ನು ನೀಡಿದರೆ ಹೊರತಾಗಿ ಇಲ್ಲಿಯವರೆಗೆ ಉದ್ಯೋಗ ಮಾತ್ರ ದೊರಕಲಿಲ್ಲ. ಬಿಜೆಪಿ ಸರ್ಕಾರವು ಬೃಹತ್ ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ ಎಂಬುದಕ್ಕೆ ದಿನೇ ದಿನೇ ಆಧಾರಗಳು ಲಭ್ಯವಾಗುತ್ತಿವೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

        ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಮೂಲಕ ರಾಷ್ಟ್ರಪತಿಗಳು ಹಾಗೂ ಪ್ರಧಾನಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಎಸ್.ಪಿ.ಮುದ್ದಹನುಮೆಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆಂಚಮಾರಯ್ಯ, ಮಾಜಿ ಶಾಸಕ ರಫೀಕ್ ಅಹಮ್ಮದ್, ಮುರಳೀಧರ ಹಾಲಪ್ಪ, ನಿರಂಜನ್, ನಯಾಜ್‍ಅಹಮ್ಮದ್, ಸೋಮಶೇಖರ್, ಮೆಹಬೂಬ್‍ಪಾಷಾ, ಆಟೋರಾಜು, ಇಂದಿರಾದೇನಾನಾಯ್ಕ್, ಮರಿಚೆನ್ನಮ್ಮ, ತು.ಬಿ.ಮಲ್ಲೇಶ್ ಮತ್ತಿತರರಿದ್ದರು.

                     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link