ಕೇರಳದಲ್ಲಿ ಹಕ್ಕಿ ಜ್ವರ ಪತ್ತೆ….!

ಅಲಪ್ಪುಳ:

    ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ಪತ್ತೆಯಾದ ಬೆನಲ್ಲೇ ಇದೀಗ ಕೇರಳದಲ್ಲಿ ಮಾರಕ ಹಕ್ಕಿ ಜ್ವರ ಪತ್ತೆಯಾಗಿರುವುದು ವರದಿಯಾಗಿದೆ.

   ಕೇರಳದಲ್ಲಿ ಅಲಪ್ಪುಳದಲ್ಲಿ ಹಕ್ಕಿಜ್ವರದ ಆತಂಕ ಎದುರಾಗಿದ್ದು, ಅಲಪ್ಪುಳ ಜಿಲ್ಲೆಯ ಎಡತ್ವ ಗ್ರಾಮ ಪಂಚಾಯಿತಿಯ ವಾರ್ಡ್ 1ರ ಪ್ರದೇಶದಲ್ಲಿ ಮತ್ತು ಚೆರುತನ ಗ್ರಾಮ ಪಂಚಾಯಿತಿಯ ವಾರ್ಡ್ 3ರಲ್ಲಿ ಸಾಕಿರುವ ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.‌

   ಹಕ್ಕಿ ಜ್ವರದ ಲಕ್ಷಣಗಳು ಕಂಡು ಬಂದ ಹಿನ್ನಲೆ ಮಾದರಿಗಳನ್ನು ಪರೀಕ್ಷೆಗಾಗಿ ಭೋಪಾಲ್‌ನ ಲ್ಯಾಬ್‌ಗೆ ಕಳುಹಿಸಿದಾಗ ಅದರಿಂದ ಬಂದ ವರದಿಯಲ್ಲಿ ಏವಿಯನ್ ಇನ್ಫ್ಲುಯೆನ್ಸ (H5N1) ರೋಗ ಇರುವುದು ದೃಢಪಟ್ಟಿದೆ. ವಿಚಾರ ತಿಳಿದ ಕೂಡಲೇ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ರ್‍ಯಾಪಿಡ್‌ ಆಕ್ಷನ್‌ ಫೋರ್ಸ್‌ ತಂಡವನ್ನು ರಚಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಸೂಟಿಸಿದೆ.

   ಈಗಾಗಲೇ ಈ ತಂಡ ಕಾರ್ಯಾಚರಣೆ ನಡೆಸಿದ್ದು ಸೋಂಕು ಕಂಡುಬಂದ ಪ್ರದೇಶಗಳ ಸುತ್ತ ಕಟ್ಟೆಚ್ಚರ ವಹಿಸಿದೆ. ಸೋಂಕು ಉಲ್ಬಣಿಸದಂತೆ ಸೋಂಕಿತ ಪ್ರದೇಶಗಳ ಸುತ್ತಮುತ್ತಲ ಪ್ರದೇಶವನ್ನು ‘ರೋಗಪೀಡಿತ ವಲಯ’ ಘೋಷಣೆ ಮಾಡಿ ರಾಸಾಯನಿಕಗಳನ್ನು ಸಿಂಪಡಿಸಿ ಮುನ್ನೆಚ್ಚರಿಕೆ ವಹಿಸಿದೆ.

    ಅಲ್ಲದೆ ಈ ಪ್ರದೇಶಗಳಲ್ಲಿರುವ ಕೋಳಿಗಳು ಮತ್ತು ಬಾತುಕೋಳಿ, ಇತರೆ ಪಕ್ಷಿಗಳನ್ನೂ ಕೂಡ ಪರೀಕ್ಷೆಗೊಳಪಡಿಸಲಾಗುತ್ತದೆ. ಆದಷ್ಟು ಬೇಗ ಪಶು ಕಲ್ಯಾಣ ಇಲಾಖೆಯಿಂದ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. 

    ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಕೂಡ ನಡೆದಿದ್ದು, ಸಭೆಯಲ್ಲಿ ಸೋಂಕು ಪತ್ತೆಯಾದ ಕೇಂದ್ರದಿಂದ ಒಂದು ಕಿಲೋಮೀಟರ್ ವ್ಯಾಪ್ತಿಯೊಳಗೆ ಎಲ್ಲ ದೇಶೀಯ ಪಕ್ಷಿಗಳನ್ನು ಕೊಂದು ನಾಶಪಡಿಸುವ   ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap