ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ಹಾಲಾಶ್ರೀ ಸ್ವಾಮೀಜಿ……!

ಬೆಂಗಳೂರು

     ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಜಿ ಎಂ ಅಭಿನವ ಶ್ರೀ ಹಾಲವೀರಜ್ಜ ಅಲಿಯಾಸ್‌ ಅಭಿನವ ಹಾಲಶ್ರೀ ಸ್ವಾಮೀಜಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

     ಸ್ವಾಮೀಜಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ಏಕಸದಸ್ಯ ರಜಾಕಾಲೀನ ಪೀಠವು ಗುರುವಾರ ವಿಚಾರಣೆ ನಡೆಸಿತು. ಅರ್ಜಿಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ. ವಿಚಾರಣೆ ಮುಂದೂಡಿತು.

     ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ನನ್ನಿಂದ ರೂ.5 ಕೋಟಿ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಉದ್ಯಮಿ ಗೋವಿಂದಬಾಬು ಪೂಜಾರಿ ಪೊಲೀಸರಿಗೆ ದೂರು ನೀಡಿದ್ದರು.

     ಈ ಪ್ರಕರಣದಲ್ಲಿ ರೂ.1.50 ಕೋಟಿ ಪಡೆದ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು 2023ರ ಸೆಪ್ಟೆಂಬರ್ 19ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದರು. ಇತ್ತೀಚೆಗಷ್ಟೇ ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿತ್ತು.

     ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ನನ್ನಿಂದ 5 ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳಾದ ಹಿಂದೂ ಕಾರ್ಯಕರ್ತೆ ಚೈತ್ರಾ, ಶ್ರೀಕಾಂತ್​, ರಮೇಶ್​, ಗಗನ್​, ಪ್ರಜ್ವಲ್​ ಹಾಗೂ ಧನರಾಜ್​ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

    ಮೂರನೇ ಆರೋಪಿ ಅಭಿನವಶ್ರೀ ಹಾಲವೀರಪ್ಪಜ್ಜ ಸ್ವಾಮೀಜಿ ಪ್ರಕರಣ ದಾಖಲಾದ ಬಳಿಕ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ನಂತರ 1.50 ಕೋಟಿ ರೂ ಪಡೆದ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು 2023ರ ಸೆಪ್ಟೆಂಬರ್ 19ರಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಒಡಿಶಾದ ಕಟಕ್‌ನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು. ಇತ್ತೀಚೆಗಷ್ಟೇ ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದ ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಅರ್ಜಿ ತಿರಸ್ಕರಿಸಿತ್ತು.

    ಈ ಪ್ರಕರಣದಲ್ಲಿ ಈಗಾಗಲೇ ಆರೋಪಿಗಳಿಂದ ಸಿಸಿಬಿ ಪೊಲೀಸರು ಹಣ ಜಪ್ತಿ ಮಾಡಿದ್ದು, ಹಿರೇಹಡಗಲಿ ಹಾಲಶ್ರೀ ಮಠದಲ್ಲಿ 56 ಲಕ್ಷ ರೂ ಹಾಗೂ ಚೈತ್ರಾ ಅವರಿಂದ 2 ಕೋಟಿ ರೂ., ಚಿನ್ನಾಭರಣ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap