ಹಳಿಯಾಳ:
ಹೆಚ್ಚು ಮೊಬೈಲ್ ನೋಡಬೇಡ ಎಂದು ತಂದೆ ಬುದ್ಧಿ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ15 ರಂದು ಹಳಿಯಾಳ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ನಡೆದಿದೆ.ಓಂ ಮನೋಹರ ಕದಂ(13)ಎಂಬ ಬಾಲಕ ನಿನ್ನೆ ಸಂಜೆ ತನ್ನ ಮನೆಯ ಜಂತಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ ಮನೋಹರ ಕದಂ ದೂರು ನೀಡಿದ್ದು ಹಳಿಯಾಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
