ಮೈಸೂರು :
ಕರ್ನಾಟಕದ ಹೆಮ್ಮೆ ನಾಡಿನ ಸಮಸ್ತರಿಗೂ ಹಬ್ಬದಂತಿರುವ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ನಾದ ಬ್ರಹ್ಮ ಎಂದೇ ಪ್ರಸಿದ್ದರಾದ ಸಂಗೀತ ನಿರ್ಧೇಶಕ ಹಂಸಲೇಖ ಅವರು ಚಾಲನೆ ನೀಡಲಿದ್ದಾರೆ.
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಾಳೆ ಬೆಳಗ್ಗೆ 10.15 ರಿಂದ 10.35ರ ವೃಶ್ಚಿಕ ಲಗ್ನದಲ್ಲಿ ಹಂಸಲೇಖ ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.ನಾಡ ದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾಗೆ ಕ್ಷಣಗಣನೆ ಆರಂಭವಾಗಿದ್ದು, ಸಾಂಸ್ಕೃತಿಕ ನಗರಿಯಲ್ಲಿ ಭರ್ಜರಿ ಸಿದ್ಧತೆ ನಡೆದಿದೆ. ಈ ನಡುವೆ ಕೆ.ಎಸ್.ಆರ್.ಟಿ.ಸಿ ದಸರಾ ವೀಕ್ಷಣೆಗೆ ಬರುವವರಿಗಾಗಿ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ ಮಾಡಿದೆ.
ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗಾಗಿ ಕೆ.ಎಸ್.ಆರ್.ಟಿ.ಸಿ ಟೂರ್ ಪ್ಯಾಕೇಜ್ ಘೋಷಿಸಿದ್ದು, ಗಿರಿದರ್ಶಿನಿ, ದೇವದರ್ಶಿನಿ, ಜಲದರ್ಶಿನಿ ಹಾಗೂ ಕೊಡಗು ಟ್ರಿಪ್ ಆಯೋಜನೆ ಮಾಡಿದೆ.