ಅದ್ದೂರಿಯಾಗಿ ನಡೆದ ಹನುಮ ಜಯಂತಿ, ಕನ್ನಡ ರಾಜ್ಯೋತ್ಸವ ಹಾಗೂ ಲಕ್ಷ ದೀಪೋತ್ಸವ

ಗುಬ್ಬಿ:

    ಗುಬ್ಬಿ ತಾಲ್ಲೂಕಿನ ಸಿ ಎಸ್ ಪುರ ಹೋಬಳಿಯ ಮಣಿಕುಪ್ಪೆ ಗ್ರಾಮದಲ್ಲಿ ಹನುಮ ಜಯಂತಿ, ಕನ್ನಡ ರಾಜ್ಯೋತ್ಸವ ಹಾಗೂ ಲಕ್ಷ ದೀಪೋತ್ಸವ ಮಂಗಳವಾರ ರಾತ್ರಿ ಅದ್ದೂರಿಯಾಗಿ ನಡೆಯಿತು. ಹಚ್ಚೇವು ಕನ್ನಡದ ದೀಪ ಹಾಡಿನೊಂದಿಗೆ ಗ್ರಾಮಸ್ಥರು ಲಕ್ಷ ದೀಪೋತ್ಸವವನ್ನು ಬೆಳಗಿಸಿದರು. ಹನುಮ ಜಯಂತಿಯ ಅಂಗವಾಗಿ ಬೆಳ್ಳಿ ಪಲ್ಲಕ್ಕಿಯಲ್ಲಿ ಶ್ರೀ ಆಂಜನೇಯಸ್ವಾಮಿಯ ಉತ್ಸವ ಮೆರವಣಿಗೆ ಊರಿನ ಪ್ರಮುಖ ರಾಜಬೀದಿಗಳಲ್ಲಿ ನಡೆಯಿತು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

    ಶ್ರೀ ನರಸಿಂಹ ಆಂಜನೇಯ ಸ್ವಾಮಿಯ ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ವೆಂಕಟೇಶ್ ಮಾತನಾಡಿ ಕಳೆದ 25 ವರ್ಷಗಳಿಂದ ಹನುಮ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಲಕ್ಷದೀಪೋತ್ಸವವನ್ನು ಆಚರಿಸುತ್ತಾ ಬರುತ್ತಿದ್ದೇವೆ. ವರ್ಷದ 350 ದಿನದಲ್ಲಿ 250 ದಿನ ರಾಜಬೀದಿಗಳಲ್ಲಿ ಹನುಮನ ಮೆರವಣಿಗೆ ನಡೆಯುತ್ತದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಿಂದ ಭಕ್ತಾದಿಗಳು ಈ ದೇವಾಲಯಕ್ಕೆ ಆಗಮಿಸುತ್ತಾರೆ ಎಂದು ತಿಳಿಸಿದರು.

    ಕನ್ನಡ ಯುವಕರ ಸಂಘದ ಅಧ್ಯಕ್ಷ ಚಂದ್ರು ಮಾತನಾಡಿ ಪ್ರತಿ ವರ್ಷವೂ ನಾವು ಆಚರಿಸುವ ಲಕ್ಷ ದೀಪೋತ್ಸವದಲ್ಲಿ ಕನ್ನಡ ರಾಜ್ಯೋತ್ಸವ ಡಿಂಡಿಮ ಬೆಳಗುತ್ತದೆ. ಕನ್ನಡಿಗರು ಮಾತೃಭಾಷೆಗೆ ಮೊದಲ ಆದ್ಯತೆ ನೀಡಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ನಾರಯಣ್, ವಾಸು, ಬಸವರಾಜು, ರಘು, ರಾಜು, ಕುಮಾರ್, ಶ್ರೀಕಂಠಮೂರ್ತಿ, ತಿಮ್ಮೆಗೌಡ, ಕೃಷ್ಣೋಜಿರಾವ್ ಸೇರಿದಂತೆ ಇತರರು ಸುತ್ತ ಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link