ಹಾರ್ದಿಕ್‌ ಪಾಂಡ್ಯ ದಾಂಪತ್ಯ ಕೆಡಲು ಕಾರಣ ಬಿಚ್ಚಿಟ್ಟ ಆಪ್ತರು ….!

ವದೆಹಲಿ: 

    ಟೀಮ್​ ಇಂಡಿಯಾದ ಸ್ಟಾರ್​ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಜನಪ್ರಿಯ ಮಾಡೆಲ್ ನತಾಶಾ ಸ್ಟಾಂಕೋವಿಕ್​ ತಮ್ಮ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಪೂರ್ಣ ವಿರಾಮ ಘೋಷಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಡಿವೋರ್ಸ್​ ವಿಚಾರವಾಗಿ ಸಾಕಷ್ಟು ವದಂತಿಗಳು ಹರಿದಾಡಿದ್ದವು.

  ಸಾಮಾಜಿಕ ಜಾಲತಾಣದ ಮೂಲಕ ಇಬ್ಬರು ತಮ್ಮ ವಿಚ್ಛೇದನವನ್ನು ಖಚಿತಪಡಿಸುವ ಮೂಲಕ ವದಂತಿಗಳು ನಿಜ ಎಂದು ಒಪ್ಪಿಕೊಂಡಿದ್ದಾರೆ. ಡಿವೋರ್ಸ್​ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆಯೂ ಶುರುವಾಗಿದೆ. ಇಬ್ಬರ ಡಿವೋರ್ಸ್​ಗೆ ಕಾರಣ ಏನಿರಬಹುದು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಇದರ ಬೆನ್ನಲ್ಲೇ ಹಾರ್ದಿಕ್​ ಮತ್ತು ನತಾಶಾರ ಆಪ್ತ ಮೂಲಗಳು ಸ್ಫೋಟಕ ಸಂಗತಿಯೊಂದನ್ನು ಬಹಿರಂಗಪಡಿಸಿವೆ.

   ಹಾರ್ದಿಕ್ ಮತ್ತು ನತಾಶಾ ಇಬ್ಬರು ಸಂಪೂರ್ಣ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆದಿದ್ದಾರೆ. ಹಾರ್ದಿಕ್ ಭಾಗವಹಿಸಿದ ಎಲ್ಲ ಪಂದ್ಯಗಳಲ್ಲೂ ನತಾಶಾ ಗೈರುಹಾಜರಿ ಎದ್ದು ಕಾಣುತ್ತಿತ್ತು. ಕೆಲವು ತಿಂಗಳುಗಳಿಂದ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇದು ವಿಚ್ಛೇದನದ ವದಂತಿಗಳಿಗೆ ಪ್ರಮುಖ ಕಾರಣವಾಯಿತು. ಇದಾದ ಬಳಿಕ ನತಾಶಾ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಕೆಲವು ಬದಲಾವಣೆಗಳು ವಿಚ್ಛೇದನ ವಂದತಿಗೆ ಮತ್ತಷ್ಟು ಪುಷ್ಠಿ ನೀಡಿತು.

   ನತಾಶಾ ತನ್ನ ಇನ್​ಸ್ಟಾಗ್ರಾಂ ಪ್ರೊಫೈಲ್​ನಿಂದ ಹಾರ್ದಿಕ್ ಹೆಸರು ಮತ್ತು ಫೋಟೋಗಳನ್ನು ತೆಗೆದುಹಾಕಿದರು. ಇದು ಇಲ್ಲಿಗೆ ನಿಲ್ಲಲಿಲ್ಲ, ಇತ್ತೀಚೆಗೆ ಮುಗಿದ ಟಿ20 ವಿಶ್ವಕಪ್​ನಲ್ಲಿ ಟೀಮ್​ ಇಂಡಿಯಾ ಟ್ರೋಫಿ ಜಯಿಸಿ ಇತಿಹಾಸ ಬರೆಯಿತು. ಈ ವೇಳೆ ಕೆಲ ಆಟಗಾರರು ತಮ್ಮ ಕುಟುಂಬದ ಜತೆ ವಿಜಯೋತ್ಸವ ಆಚರಿಸಿದರು. ಆದರೆ, ಪಾಂಡ್ಯ ಕುಟುಂಬ ಕಾಣಲಿಲ್ಲ. ಅಲ್ಲಿಗೆ ಇಬ್ಬರ ನಡುವೆ ಏನೋ ಸರಿಯಿಲ್ಲ ಎಂಬುದು ಖಚಿತವಾಯಿತು. ಇದೀಗ ಅಧಿಕೃತವಾಗಿಯೇ ಇಬ್ಬರು ಘೋಷಣೆ ಮಾಡಿದ್ದಾರೆ.

   ಹಾರ್ದಿಕ್​ ಮತ್ತು ನತಾಶಾ ನಡುವಿನ ಬ್ರೇಕಪ್​ಗೆ ಸಂವಹನ ಕೊರತೆಯೇ ಕಾರಣ ಎನ್ನುತ್ತಾರೆ ಅವರ ಆಪ್ತರು. ಇಬ್ಬರ ನಡುವಿನ ಮನಸ್ತಾಪವನ್ನು ಮತ್ತು ಜಗಳವನ್ನು ಸಾವಧಾನದಿಂದ ಪರಿಹರಿಸುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್​ಗೆ ಕಾರಣವಾಯಿತು. ಇದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರ ಬಗ್ಗೆಯೂ ಯಾವುದೇ ತಪ್ಪು ಸುದ್ದಿ ಹಬ್ಬಿಸಬಾರದು ಎಂದು ಆಪ್ತ ಮೂಲಗಳು ತಿಳಿಸಿವೆ.

   ಅಂದಹಾಗೆ ಹಾರ್ದಿಕ್ ಮತ್ತು ನತಾಶಾ ತಮ್ಮ ವೈಯಕ್ತಿಕ ಆದ್ಯತೆಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಲು ಬಯಸುತ್ತಾರಂತೆ. ಮದುವೆ ಸಂಬಂಧದಲ್ಲಿ ಮುಂದುವರಿದರೆ ಅದು ಸಾಧ್ಯವಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರಂತೆ. ಹಾರ್ದಿಕ್ ಮತ್ತು ನತಾಶಾ ಇಬ್ಬರೂ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಇಬ್ಬರೂ ವಿಚ್ಛೇದನ ಕೋರಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ, ಭಿನ್ನಾಭಿಪ್ರಾಯದಿಂದ ಬೇರ್ಪಟ್ಟರೂ ಪರಸ್ಪರ ಗೌರವ ಕಳೆದುಕೊಳ್ಳುವುದಿಲ್ಲ, ಪುತ್ರ ಅಗಸ್ತ್ಯನ ಪಾಲನೆಗೆ ಪ್ರಾಮುಖ್ಯತೆ ನೀಡುವುದಾಗಿ ದಂಪತಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ