ಹರಿಯಾಣ ಚುನಾವಣೆ : 1031 ಮಂದಿ ಅಭ್ಯರ್ಥಿಗ ಭವಿಷ್ಯ ನಿರ್ಧಾರ

ಚಂಡೀಗಢ:

   90 ಸದಸ್ಯ ಬಲದ ಹರಿಯಾಣ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಶನಿವಾರ ಆರಂಭವಾಗಿದ್ದು, ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್’ನ ಭೂಪಿಂದರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್ ಫೋಗಟ್, ಬಿಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಮಂದಿ ಅಭ್ಯರ್ಥಿಗ ಭವಿಷ್ಯ ನಿರ್ಧಾರವಾಗಲಿದೆ.

   ಆಡಳಿತಾರೂಢ ಬಿಜೆಪಿ ರಾಜ್ಯದಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದು, ದಶಕದ ನಂತರ ಕಾಂಗ್ರೆಸ್ ಪುನರಾಗಮನದ ನಿರೀಕ್ಷೆಯಲ್ಲಿದೆ. ಅ.8ರಂದು ಮತ ಎಣಿಕೆ ನಡೆಯಲಿದೆ.

   8 ,821 ಶತಾಯುಷಿಗಳು ಸೇರಿ 2,03,54,350 ಮತದಾರರಿದ್ದಾರೆ. 101 ಮಹಿಳೆಯರು ಸೇರಿ 1,031 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ, ಈ ಪೈಕಿ 464 ಅಭ್ಯರ್ಥಿಗಳು ಪಕ್ಷೇತರರಿದ್ದಾರೆ. ಮತದಾನಕ್ಕಾಗಿ ರಾಜ್ಯದಲ್ಲಿ 20,632 ಮತಗಟ್ಟೆ ಸ್ಥಾಪಿಸಲಾಗಿದೆ. ಬಿಜೆಪಿ, ಕಾಂಗ್ರೆಸ್,ಎಎಪಿ, ಐಎನ್ಎಲ್’ಡಿ-ಬಿಎಸ್’ಪಿ ಮತ್ತು ಜೆಜೆಪಿ-ಆಜಾದ್ ಸಮಾಜ ಪಕ್ಷ ಕಣದಲ್ಲಿರುವ ರಾಜಕೀಯ ಪಕ್ಷಗಳಾಗಿವೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್ ಮತ್ತು ಜೆಜೆಪಿ 10 ಸ್ಥಾನ ಗೆದ್ದಿದ್ದವು. ಬಿಜೆಪಿಗೆ ಬಹುಮತ ಬಾರದ ಕಾರಣ ಜೆಜೆಪಿ ಬೆಂಬಲ ನೀಡಿತ್ತು. ಆದರೆ, ಇದೀಗ ಬಿಜೆಪಿ ಹಾಗೂ ಜೆಜೆಪಿ ಮೈತ್ರಿ ಮುರಿದುಕೊಂಡು ಪ್ರತ್ಯೇಕವಾಗಿ ಕಣಕ್ಕಿಳಿದಿವೆ.

   ಈ ನಡುವೆ ಇಂದು ಸಂಜೆ ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿವೆ ಎಂದು ವರದಿಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ 3 ಹಂತದಲ್ಲಿ ಸೆ.18, 25 ಮತ್ತು ಅ.1 ರಂದು ಚುನಾವಣೆ ನಡೆದಿತ್ತು.

Recent Articles

spot_img

Related Stories

Share via
Copy link
Powered by Social Snap