ದ್ವೇಷ ಭಾಷಣಗಳಿಗೆ ಕಡಿವಾಣ ಅಗತ್ಯ : ಸುಪ್ರೀಂ ಕೋರ್ಟ್

ನವದೆಹಲಿ:

     ಚುನಾವಣೆಯೇ ಆಗಲಿ ಅಥವಾ ಬೇರೆಡೆಗಳಲ್ಲಿ ರಾಜಕಾರಣಿಗಳಅಗಲಿ ಬೇರೆಯವರೆ ಆಗಲಿ  ದ್ವೇಷ ಭಾಷಣದ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾದ ನಂತರ ತೆಗೆದುಕೊಂಡ ಕ್ರಮಗಳನ್ನು ವಿವರಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರವನ್ನು ಕೇಳಿದೆ. ಏಕೆಂದರೆ, ದೇಶದಲ್ಲಿ ಕೋಮು ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ದ್ವೇಷದ ಭಾಷಣಕ್ಕೆ ಕಡಿವಾಣ ಹಾಕುವುದು ಮುಖ್ಯ ಎಂದು ಪೀಠ ಹೇಳಿದೆ.

     ಇಂತಹ ಹೇಳಿಕೆಗಳನ್ನು ನೀಡುವ ವ್ಯಕ್ತಿಗಳ ವಿರುದ್ಧ ಕೇಂದ್ರವು ಕ್ರಮ ಕೈಗೊಳ್ಳುವ ಅಗತ್ಯವನ್ನು ಸುಪ್ರೀಂ ಕೋರ್ಟ್ ಒತ್ತಿಹೇಳಿದೆ. ಕೇವಲ ದೂರುಗಳನ್ನು ದಾಖಲಿಸುವುದರಿಂದ ದ್ವೇಷದ ಭಾಷಣಗಳ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ ಎಂದು ಹೇಳಿದೆ.

     ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರ ಪೀಠವು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಈ ನ್ಯಾಯಾಲಯವು ಈ ದೇಶದಲ್ಲಿ ಏನಾಗುತ್ತಿದೆ ಎಂಬುದರ ಕುರಿತು ಒಂದು ನಿರ್ದಿಷ್ಟ ತಿಳುವಳಿಕೆಯ ಮೇರೆಗೆ ತಪ್ಪಿತಸ್ಥರ ವಿರುದ್ಧ ‘ಸ್ವಯಂಪ್ರೇರಿತ’ ಕ್ರಮವನ್ನು ನಿರ್ದೇಶಿಸುವ ಆದೇಶವನ್ನು ನೀಡಿದೆ ಮತ್ತು ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.

     ಇಲ್ಲಿಯವರೆಗೆ ದ್ವೇಷದ ಭಾಷಣಗಳಿಗೆ ಸಂಬಂಧಿಸಿದಂತೆ 18 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಮೆಹ್ತಾ ಹೇಳಿದರು. ನ್ಯಾಯಾಲಯವು ಬುಧವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap