ಹವಾಮಾನ ಇಲಾಖೆ : 19ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 28ರವರೆಗೆ ಮಳೆ

ಬೆಂಗಳೂರು :

     ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.28ರವರೆಗೂ ಮಳೆಯಾಗಲಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.

    ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆ ಇದೆ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುತ್ತಿದ್ದು, ತಮಿಳುನಾಡು, ಆಂಧ್ರಪ್ರದೇಶದ ಜತೆ ಕರ್ನಾಟಕದಲ್ಲೂ ಮಳೆಯಾಗಲಿದೆ ಎನ್ನುವ ಎಚ್ಚರಿಕೆ ನೀಡಲಾಗಿದೆ. ದಾವಣಗೆರೆಯಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ.

   ಡಿಸೆಂಬರ್ 28 ರಿಂದ 29 ರವರೆಗೆ ಒಳನಾಡಿನ ಕೆಲವು ಸ್ಥಳಗಳಲ್ಲಿ ಮೋಡಕವಿದ ವಾತಾವರಣವಿರಲಿದೆ. ಡಿಸೆಂಬರ್ 25 ರ ಬೆಳಗಿನವರೆಗಿನ ಬೆಂಗಳೂರಿನ ಹವಾಮಾನ ಮುನ್ಸೂಚನೆಯು ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಎಚ್​ಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  ಬೀದರ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

   ಧಾರವಾಡದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recent Articles

spot_img

Related Stories

Share via
Copy link