ಬೆಂಗಳೂರು :
ಹವಾಲಾ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಎರಡು ಮೊಬೈಲ್ ಹಾಗು 4.50 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರ್ತಪೇಟೆ ಪಿಆರ್ ಎಸ್ ಲೇನ್ ನಿವಾಸಿಗಳಾದ ರಾಣಾ ಸಾಮ್ಲಾ (36), ಚೇತನ್ (20) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಗಳು ಗುಜರಾತ್ ಮಹಷಾಣ ಜಿಲ್ಲೆಯ ಬಿಸ್ ನಗರದ ಲಾಚಡಿ ಗ್ರಾಮದವರಾಗಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ಜೂಜಾಟಕ್ಕೆ ಸಂಬಂಧಿಸಿದಂತೆ ಒಟ್ಟು 4.50 ಲಕ್ಷರೂಪಾಯಿ ನಗದು, 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/Arrest.gif)