ಬೆಂಗಳೂರು
ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕುವಲ್ಲಿ ಸ್ಥಳೀಯ ನಾಗರಿಕ ಸಂಸ್ಥೆ ಅಧಕಾರಿಗಳು ವಿಫಲವಾಗಿದ್ದಾರೆ. ಈ ಸಂಬಂಧ ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಬಿಬಿಎಂಪಿ ಮತ್ತು ಬಿಡಿಎಗೆ ಖಡಕ್ ನಿರ್ದೇಶನವೊಂದನ್ನು ನೀಡಿದೆ.
ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆಗೆ ತೆರೆ ಬಿದ್ದಿಲ್ಲ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ವಿಫಲವಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಭಿವೃದ್ಧಿ ಪ್ರಾಧಿಕಾರ (BDA) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಗೆ ಹೈಕೋರ್ಟ್ ಸೂಚನೆ ನೀಡಿದೆ.
ಅಷ್ಟೇ ಅಲ್ಲದೇ, ನಗರ ವ್ಯಾಪ್ತಿಯಲ್ಲಿ ಅನಧಿಕೃತ ಪೋಸ್ಟರ್, ಹೋರ್ಡಿಂಗ್, ಫ್ಲೆಕ್ಸ್, ಬ್ಯಾನರ್ ಅಳವಡಿಕೆ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ಮಾರ್ಚ್ 6 ರೊಳಗೆ ಸಂಪೂರ್ಣ ವರದಿಯನ್ನು ಸಲ್ಲಿಸುವಂತೆ ಸಂಬಂಧಿಸಿದ ಈ ಎರಡು ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಹೈಕೋರ್ಟ್ ಕಟ್ಟು ನಿಟ್ಟಾಗಿ ಸೂಚನೆ ನೀಡಿದೆ. ಬಳಿಕ ಅರ್ಜಿ ವಿಚಾರಣೆಯನ್ನು ಮುಂದಿನ ತಿಂಗಳ ಮಾರ್ಚ್ 7ಕ್ಕೆ ಮುಂದೂಡಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/06/bbmp.jpg)