ಬೆಂಗಳೂರು:
ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರ್ಕಾರದ 2019-20ನೇ ಸಾಲಿನ 2 ನೇ ಬಜೆಟ್ ಅನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಮಂಡಿಸಿದ್ದು, ಬಜೆಟ್ ನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪನವರ ಕ್ಷೇತ್ರಗಳಿಗೆ ಬಂಪರ್ ಕೊಡುಗೆ ನೀಡಿದ್ದಾರೆ.
ಸಿದ್ದರಾಮಯ್ಯನವರು ಪ್ರತಿನಿಧಿಸುತ್ತಿರುವ ಬಾದಾಮಿ ವಿಧಾನಸಭಾ ಕ್ಷೇತ್ರದ ನೀರಾವರಿ ಯೋಜನೆಗಳಿಗೆ 300 ಕೋಟಿ ರೂ. ಅನುದಾನ ನೀಡಲಾಗಿದ್ದು, ಯಡಿಯೂರಪ್ಪನವರು ಪ್ರತಿನಿಧಿಸುತ್ತಿರುವ ಶಿಕಾರಿಪುರ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು 200 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.
ಶಿವಮೊಗ್ಗ ಜಿಲ್ಲೆಗೆ ಬಜೆಟ್ ನಲ್ಲಿ ಘೋಷಣೆಯಾಗಿರುವ ವಿವರ ಕೆಳಗಿನಂತಿದೆ.
- ಶಿವಮೊಗ್ಗ ಜಿಲ್ಲೆಯ ಹೊಳೆ ಹನಸವಾಡಿ ಗ್ರಾಮದ ಹತ್ತಿರ ತುಂಗಾ ನದಿಯಿಂದ ಏತ ನೀರಾವರಿ ಮೂಲಕ 8 ಕೆರೆಗಳಿಗೆ ನೀರು ತುಂಬಿಸಲು 13 ಕೋಟಿ ರೂ ಅನುದಾನ
- ರಾಜ್ಯದಲ್ಲಿ ಕೆರೆ ತುಂಬಿಸುವಿಕೆ ಯೋಜನೆ ಮೂಲಕ ಶಿಕಾರಿಪುರ ನೀರಾವರಿ ಯೋಜನೆಗೆ 200 ಕೋಟಿ ಅನುದಾನ
- ರಾಜ್ಯದ ಮಹಾನಗರ ಪಾಲಿಕೆ ಅಭಿವೃಧ್ಧಿಗೆ 1325 ಕೋಟಿ ರೂ ವೆಚ್ಚದಲ್ಲಿ ಮಹಾತ್ನ ಗಾಂಧಿ ವಿಕಾಸ ಯೋಜನೆ ಜಾರಿಗೆ ಸಿದ್ದತೆ ನಡೆಸಿದ್ದು ಇದರ ಅಡಿ ಶಿವಮೊಗ್ಗ ಮಹಾನಗರ ಪಾಲಿಕೆಗೆ ತಲಾ 125 ಕೋಟಿ ಅನುದಾನ ನಿಗದಿ
- ಮಂಗನ ಕಾಯಿಲೆ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾ ಅಸ್ಪತ್ರೆಯಲ್ಲಿ 5 ಕೋಟಿ ರೂಗಳ ವೆಚ್ಚದಲ್ಲಿ ಸಂಶೋಧನಾ ಮತ್ತು ಚಿಕಿತ್ಸಾ ಘಟಕ ಪ್ರಾರಂಭ
- ಶಿವಮೊಗ್ಗ ಏರ್ಸ್ಟ್ರಿಪ್ (ರನ್ವೇ) ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ ಹಾಗೂ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಕ್ರಮ.
ಈ ಮೂಲಕ ಮೈತ್ರಿ ಸರ್ಕಾರಕ್ಕೆ ಬಿಎಸ್ ಯಡಿಯೂರಪ್ಪ ಎಷ್ಟೇ ತೊಂದರೆ ನೀಡಿದರೂ ಅವರ ಕ್ಷೇತ್ರಕ್ಕೆ ಮಾತ್ರ ಸಿಎಂ ಕುಮಾರಸ್ವಾಮಿ ಬಜೆಟ್ನಲ್ಲಿ ಬಂಪರ್ ಕೊಡುಗೆ ನೀಡುವುದನ್ನು ಸಿಎಂ ಕುಮಾರಸ್ವಾಮಿ ಮರೆತಿಲ್ಲ. ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಮುಖ್ಯ ಎಂಬುದನ್ನು ಈ ಮೂಲಕ ಸಿಎಂ ಸಾಬೀತು ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
