ಬೆಂಗಳೂರು
ಲೋಕಸಭಾ ಚುನಾವಣೆ ಹಿನ್ಕೆಲೆ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದು, ಕಾಂಗ್ರೆಸ್ ವಿರುದ್ಧ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಇತ್ತ ಮಂಡ್ಯದಿಂದ ಸ್ಪರ್ಧೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಗೆದ್ದ ಬಳಿಕ ಕೇಂದ್ರ ಮಂತ್ರಿಯಾಗಲಿದ್ದಾರೆ ಎನ್ನುವ ಚರ್ಚೆ ಜೋರಾಗಿದ್ದು, ಇದೀಗ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಮಹತ್ವದ ಸುಳಿವು ನೀಡಿದ್ದಾರೆ.
ಕೇಂದ್ರ ಸಚಿವ ಸಂಪುಟಕ್ಕೆ ತಮ್ಮ ಅಳಿಯ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರನ್ನು ಸೇರ್ಪಡೆ ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ಸುಕರಾಗಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸುಳಿವು ನೀಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ತಾವು ವಿರಮಿಸುವುದಿಲ್ಲ ಎಂದು ಗೌಡರು ಪಣತೊಟ್ಟಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ನಿನ್ನೆ ಮಂಗಳವಾರ ಡಾ.ಮಂಜುನಾಥ್ ಪರ ಪ್ರಚಾರ ನಡೆಸಿದ ಅವರು, ಮಂಜುನಾಥ್ ಅವರು ತಮ್ಮ ವೈದ್ಯ ವೃತ್ತಿಯಲ್ಲಿ ಎಂಟು ಲಕ್ಷಕ್ಕೂ ಅಧಿಕ ಆಪರೇಷನ್ ಮಾಡಿ ಬಡವರಿಗೆ ಸಹಾಯ ಮಾಡಿದ್ದಾರೆ, ಹೀಗಾಗಿ ರಾಷ್ಟ್ರೀಯ ನಾಯಕರು ಅವರನ್ನು ತಮ್ಮ ಸಂಪುಟದಲ್ಲಿ ಸೇರಿಸಬೇಕೆಂದು ಬಯಸಿದ್ದಾರೆ. “ನಾನು ಇಲ್ಲಿನ ಜನರನ್ನು ಮತ ಚಲಾಯಿಸುವಂತೆ ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದರು.
ಕೇಂದ್ರದಲ್ಲಿ ಮೋದಿ ಮತ್ತು ಶಾ ಅವರು ಡಾ ಮಂಜುನಾಥ್ ಅವರ ಶಕ್ತಿಯನ್ನು ಗುರುತಿಸಿ ಬೆಂಗಳೂರು ಗ್ರಾಮಾಂತರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಕೇಳಿಕೊಂಡರು. ಮಂಜುನಾಥ್ ಅವರ ಸೇವೆ ರಾಷ್ಟ್ರಮಟ್ಟದಲ್ಲಿ ಅಗತ್ಯವಿದೆ ಎಂದು ಬಿಜೆಪಿ ನಾಯಕರು ಹೇಳಿದ್ದರು. ಇದು ಅನಿವಾರ್ಯ ಎಂದು ಹೇಳಿದರು ಎಂದರು. ಮಂಜುನಾಥ್ ಅವರು 16 ವರ್ಷಗಳಿಂದ ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸಾಕಷ್ಟು ಗುರುತರ ಕೆಲಸ ಮಾಡಿದ್ದಾರೆ ಎಂದರು.
‘ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ, ಜಯದೇವದಲ್ಲಿ ಡಾ.ಮಂಜುನಾಥ್‌ಗೆ ಅವಧಿ ವಿಸ್ತರಿಸಿದ್ದರು. ಮಂಜುನಾಥ್ ಅವರು ಆಸ್ಪತ್ರೆಯಲ್ಲಿ ಹಾಸಿಗೆಯ ಸಾಮರ್ಥ್ಯವನ್ನು ಹೆಚ್ಚಿಸಿದರು ಎಂದು ತಮ್ಮ ಅಳಿಯ ಮಾಡಿರುವ ಕೆಲಸ ಬಗ್ಗೆ ಹೇಳಿ ಕ್ಷೇತ್ರದ ಮತದಾರರ ಗಮನ ಸೆಳೆಯುವ ಪ್ರಯತ್ನ ಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಗೌಡರು. ಇಂತಹ ಭ್ರಷ್ಟ ಸರ್ಕಾರವನ್ನು ರಾಜ್ಯದಿಂದ ಕಿತ್ತೊಗೆಯುವವರೆಗೂ ನಾನು ವಿರಮಿಸುವುದಿಲ್ಲ. ಮೇ 5ರವರೆಗೆ ಕರ್ನಾಟಕದಾದ್ಯಂತ ಸಂಚರಿಸಿ ಮತ ಯಾಚಿಸುತ್ತೇನೆ ಎಂದು ಹೇಳಿದರು.
ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ಮೋದಿ ಜೊತೆಗಿನ ಸಂವಾದವನ್ನು ನೆನಪಿಸಿಕೊಂಡ ಗೌಡರು, “ಮೋದಿ ಅವರು ನಮ್ಮ ನೋವನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ಹೇಳಿದರು. ನಾನು ಕಾವೇರಿ ಸಮಸ್ಯೆಯನ್ನು ಬಗೆಹರಿಸುತ್ತೇನೆ. ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಲ್ಲ 28 ಸ್ಥಾನಗಳನ್ನು ಗೆಲ್ಲಬೇಕಿದೆ ಎಂದು ಗೌಡ ಹೇಳಿದರು. ನಾವು ಇಲ್ಲಿ 28 ಸ್ಥಾನಗಳನ್ನು ಗೆದ್ದರೆ, ನಾನು ವೈಯಕ್ತಿಕವಾಗಿ ಮೋದಿಯವರ ಕೈ ಹಿಡಿದು ಮೇಕೆದಾಟು ಯೋಜನೆಗೆ ಅನುಮೋದನೆ ಪಡೆಯುತ್ತೇನೆ ಎಂದು ದೇವೇಗೌಡ್ರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ