ಮೇಕೆದಾಟು ಯೋಜನೆ : ಒಪ್ಪಿಗಾಗಿ ಕೈಜೋಡಿಸಿದ ಹೆಚ್‌ ಡಿ ದೇವೇಗೌಡ

ನವದೆಹಲಿ

    ಕರ್ನಾಟಕದಲ್ಲಿ ಆಗುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭೆ ಸದಸ್ಯರಾದ ಹೆಚ್‌ ಡಿ ದೇವೇಗೌಡ್ರು ಧ್ವನಿ ಎತ್ತಿದ್ದಾರೆ. ಮೇಕೆದಾಟು ಯೋಜನೆಯ ವಿಷಯವನ್ನು ಪ್ರಸ್ತಾಪ ಮಾಡಿದ ದೇವೇಗೌಡ್ರು, ರಾಜ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

    ರಾಜ್ಯಸಭೆಯಲ್ಲಿ ಮಂಗಳವಾರ ಹೆಚ್ ಡಿ ದೇವೇಗೌಡ್ರು ಮಾತನಾಡಿ, ಕೇಂದ್ರ ಸರಕಾರವು 30 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಕು ಸಂಸತ್‌ ನಲ್ಲಿ ಕೈ ಮುಗಿದು ದೇವೇಗೌಡ್ರು ಮನವಿ ಮಾಡಿದರು.

    ಸುಪ್ರೀಂ ಕೋರ್ಟ್ʼನಲ್ಲಿ ತಮಿಳುನಾಡು ಪರ ವಾದ ಮಂಡಿಸಿದ ಹಿರಿಯ ವಕೀಲರೇ ಮೆಟ್ಟೂರು ಜಲಾಶಯಕ್ಕೆ ಮೇಲ್ಭಾಗದಲ್ಲಿ ಕರ್ನಾಟಕ ಜಲಾಶಯ ನಿರ್ಮಾಣ ಮಾಡಬಹುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ದಯಮಾಡಿ ಪ್ರಧಾನಿಗಳು ಮಧ್ಯಪ್ರವೇಶ ಮಾಡಬೇಕು, ಕರ್ನಾಟಕದ ಕುಡಿಯುವ ನೀರಿನ ಸಂಕಷ್ಟವನ್ನು ಪರಿಹಾರ ಮಾಡಬೇಕು. ಇದಷ್ಟೇ ಎಲ್ಲರಿಗೂ ನನ್ನ ಪ್ರಾರ್ಥನೆ ಎಂದು ಕೈ ಜೋಡಿಸಿ ಮನವಿಕೊಂಡರು.

    ಇನ್ನೂ ಸದನದಲ್ಲಿ ಮಂಡಸಲಾಗಿದ್ದ ಮಾಲಿನ್ಯ ನಿಯಂತ್ರಣ ಮಸೂದೆಯನ್ನು ಸ್ವಾಗತ, ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ಕರ್ನಾಟಕವೂ ಸೇರಿದಂತೆ ಎಲ್ಲೆಡೆ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ನನಗೆ ಗೊತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತಮ್ಮ ಸ್ವಾರ್ಥಕ್ಕಾಗಿ, ಸ್ವಹಿತಕ್ಕಾಗಿ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬ ಬಗ್ಗೆ ಮುಖ್ಯಮಂತ್ರಿ ಆಗಿದ್ದ ನನಗೆ ಚನ್ನಾಗಿ ಗೊತ್ತಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap