ಶ್ರೀನಿವಾಸ್ ಪ್ರಸಾದ್ ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು: 

   ಶ್ರೀನಿವಾಸ್ ಪ್ರಸಾದ್ ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.ಶ್ರೀನಿವಾಸ್ ಪ್ರಸಾದ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ಸಂವಿಧಾನದ ಆಶಯಗಳನ್ನು ಪಾಲಿಸಿಕೊಂಡು ಬಂದಿದ್ದ ಶ್ರೀನಿವಾಸ್ ಪ್ರಸಾದ್ ಅವರು ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ.

   ಸಾಮಾಜಿಕ ನ್ಯಾಯದ ಪರ ಹೋರಾಟ ಮಾಡಿದವರು. ಹಳೆಯ ತಲೆಮಾರಿನ ಈ ರಾಜಕೀಯ ಮುತ್ಸದ್ದಿಯ ನಿಧನದಿಂದ ಬಹುದೊಡ್ಡ ರಾಜಕೀಯ ಕೊಂಡಿ ಕಳಚಿದಂತಾಗಿದೆ. ಅವರ ವಿಚಾರಧಾರೆಗಳು ಇಂದಿನ ಯುವಜನರಿಗೆ ಆದರ್ಶವಾಗಲಿ ಎಂದು ಹಾರೈಸಿದರು.

   ಬೇರೆ ಪಕ್ಷಗಳಲ್ಲಿದ್ದರೂ ನನ್ನ ಹಾಗೂ ಶ್ರೀನಿವಾಸ್ ಪ್ರಸಾದ್‌ರ ನಡುವೆ ಉತ್ತಮ ಸ್ನೇಹ ಬಾಂಧವ್ಯ ಹಾಗೂ ಒಡನಾಡವಿತ್ತು. ಪರಸ್ಪರ ರಾಜಕೀಯ ವೈರುಧ್ಯಗಳಿದ್ದರೂ ನಮ್ಮ ಸ್ನೇಹಕ್ಕೆ ಎಂದೂ ಧಕ್ಕೆ ಬಂದಿರಲಿಲ್ಲ. ಬುದ್ಧ, ಬಸವಣ್ಣ, ಗಾಂಧೀಜಿಯವರ ವಿಚಾರಧಾರೆಗಳನ್ನು ನಂಬಿ ನಡೆಯುವವರು ಬದುಕಿನುದ್ದಕ್ಕೂ ಮನುಷ್ಯತ್ವವನ್ನು ಪಾಲಿಸುವವರಾಗಿರುತ್ತಾರೆ. ಮನುಷ್ಯ ಮನುಷ್ಯನನ್ನು ಪರಸ್ಪರ ಗೌರವಿಸಬೇಕೇ ಹೊರತು ದ್ವೇಷಿಸಬಾರದು. ರಾಜಕೀಯ ವೈರುಧ್ಯಗಳಿಂದಾಗಿ ಪರಸ್ಪರ ಟೀಕಿಸುವುದು ಸ್ವಾಭಾವಿಕವಾಗಿದ್ದರೂ, ನಮ್ಮ ಸ್ನೇಹಕ್ಕೆಂದೂ ಧಕ್ಕೆ ಬಂದಿಲ್ಲ ಎಂದು ತಿಳಿಸಿದರು.

   ಇತ್ತೀಚೆಗೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಪಡೆದ ನಂತರ, ಕೆಲವು ಶಾಸಕಮಿತ್ರರೊಂದಿಗೆ ಅವರನ್ನು ಭೇಟಿ ಮಾಡಿದ್ದೆ. ಅವರೊಂದಿಗಿನ ಅರ್ಧ ಗಂಟೆಯ ಭೇಟಿಯಲ್ಲಿ ನಮ್ಮ ಹಿಂದಿನ ಸ್ನೇಹ ಮರುಕಳಿಸಿತ್ತು. ನಮ್ಮ ನಡುವೆ ಯಾವುದೇ ರಾಜಕೀಯ ಮಾತುಕತೆ ನಡೆಯಲಿಲ್ಲ. ಆದರೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯದ ಕೊನೆ ದಿನಗಳಲ್ಲಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಿತ್ತು ಎಂದು ಹೇಳಿದ್ದರು ಎಂದು ಮುಖ್ಯಮಂತ್ರಿ ತಿಳಿಸಿದರು.

     ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಪ್ರತಾಪ್ ಸಿಂಹ ಮತ್ತಿತರರು ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap