ತುಮಕೂರಿನಲ್ಲಿ ಒಂದೇ ದಿನ ಹೃದಯಾಘಾತಕ್ಕೆ ಇಬ್ಬರು ಬಲಿ….!

ತುಮಕೂರು: 

  ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ನಡುವೆ ತುಮಕೂರು ನಗರದಲ್ಲಿ ಹೃದಯಾಘಾತದಿಂದ ಒಂದೇ ದಿನ ಇಬ್ಬರು ಮೃತಪಟ್ಟಿರುವುದು ಕಂಡುಬಂದಿದೆ. ಹನುಮಂತಪುರದ ನಿವಾಸಿಗಳಾದ ಜಯಂತ್ (31) ಹಾಗೂ ಶ್ರೀಧರ್ (52) ಎಂಬುವರು ಹೃದಯಾಘಾತಕ್ಕೆ ಬಲಿಯಾಗಿದ್ದು, ಇದರಿಂದ ಜಿಲ್ಲೆಯ  ಜನತೆಯಲ್ಲಿ ಆತಂಕ ಮೂಡಿದೆ.

   ಜಯಂತ್, ಭಾನುವಾರ ರಾತ್ರಿ ಮನೆಯಲ್ಲಿ ಮಲಗಿದ್ದಾಗ ಎದೆ ನೋವಿನಿಂದ ಪರದಾಡಿದ್ದಾರೆ. ತಕ್ಷಣವೇ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟೊತ್ತಿಗಾಗಲೇ ಜಯಂತ್‌ನ ಪ್ರಾಣ ಪಕ್ಷಿ ಹಾರಿ ಹೋಗಿದೆ.ಇನ್ನು ಶ್ರೀಧರ್, ಭಾನುವಾರ ಬೆಳಗ್ಗೆ ಟೀ ಕುಡಿದು ನಂತರ ಮನೆಗೆ ಚಿಕನ್ ತಂದುಕೊಟ್ಟಿದ್ದಾರೆ. ಮನೆಗೆ ಬಂದ ಬಳಿಕ ಶ್ರೀಧರ್‌ಗೆ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ ಪ್ರಯೋಜನಕಾರಿಯಾಗಿಲ್ಲ.

   ಇನ್ನು ಕಳೆದ ವಾರ ತಾಲೂಕಿನ ಹೆಬ್ಬಾಕ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹೆಬ್ಬಾಕ ಗ್ರಾಮದ ನೀಲಕಂಠಸ್ವಾಮಿ ಹೃದಯಘಾತದಿಂದ ನಿಧನ ಹೊಂದಿದ್ದರು. ಜಿಲ್ಲೆಯಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. 

Recent Articles

spot_img

Related Stories

Share via
Copy link