ಮೈಸೂರು:
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತಕ್ಕೀಡಾದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ.ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ಕೆಂಪರಾಜು ಮತ್ತು ಲಕ್ಷ್ಮಮ್ಮ ದಂಪತಿ ಪುತ್ರಿ ಅನುಶ್ರೀ ಮೃತ ವಿದ್ಯಾರ್ಥಿನಿ.
ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ತಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಪರೀಕ್ಷೆ ಬರೆಯುತ್ತಿದ್ದಳು.
ಮಗಳು ಪರೀಕ್ಷೆ ಬರೆಯಲು ಹೋಗಿದ್ದಾಳೆ, ಚೆನ್ನಾಗಿ ಪರೀಕ್ಷೆ ಬರೆದು ಬರುತ್ತಾಳೆ ಎಂದು ಮಗಳಿಗಾಗಿ ಎದುರು ನೋಡುತ್ತಿದ್ದ ಪಾಲಕರಿಗೆ ಆಕೆಯ ಸಾವಿನ ಸುದ್ದಿ ಬರಸಿಡಿಲಿನಂತೆ ಬಂದೆರಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ