ಇಂದು ಬೆಂಗಳೂರು, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ಬೆಂಗಳೂರು: 

    ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಮಂಗಳವಾರ ಸಂಜೆ ಭಾರಿ ಮಳೆಯಾಗಿದೆ. ಅದೇ ರೀತಿ ಮೇ 14ರಂದು ಬುಧವಾರ ಕೂಡ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ವಿಜಯಪುರ, ಬೀದರ್‌, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ತುಮಕೂರು, ಬೆಂಗಳೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ  ಸಾಧ್ಯತೆ ಇದೆ ಹವಾಮಾನ ಎಂದು ಮುನ್ಸೂಚನೆ ನೀಡಿದೆ.

   ಇನ್ನು ಮುಂದಿನ 5 ದಿನಗಳವರೆಗೆ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಇಳಿಕೆಯ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆಗಳಿಲ್ಲ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಸಂಜೆಯ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಾಗುತ್ತದೆ. ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಜೊತೆಗೆ ಬಿರುಗಾಳಿಯ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 21°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

   ಮೇ 15ರಂದು ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

    ಮೇ 16ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆ ಹಾಗೂ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಬಹುತೇಕ ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    ಮೇ 17ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. 

   ಮೇ 18 ಮತ್ತು 19ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Recent Articles

spot_img

Related Stories

Share via
Copy link