ಬೆಂಗಳೂರು :
ಇಂದಿನಿಂದ ರಾಜ್ಯದ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಜೂನ್ 18ರ ಬಳಿಕ ಮುಂಗಾರು ಪ್ರಬಲವಾಗಲಿದ್ದು ಜೂನ್ 21ರ ವರೆಗೆ ಮಳೆಯಾಗಲಿದೆ, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಿಗೆ ಮಳೆಯಾರ್ಭಟ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, ಹಾಸನ, ಮಂಡ್ಯ ಹಾಗೂ ಜೂನ್ 19 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರಿಗೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
