ತಮಿಳುನಾಡಿನಲ್ಲಿ ಭಾರಿ ಮಳೆ

ಚೆನ್ನೈ:

ಚೆನ್ನೈನಲ್ಲಿ ಮಳೆಯ ಅರ್ಭಟ ಜೋರಾಗಿದೆ. ಚೆನ್ನೈ ಮತ್ತು ಹತ್ತಿರದ ಚೆಂಗೆಲ್‍ಪೇಟ್, ತಿರುವಳ್ಳೂರು, ಕಾಂಚೀಪುರಂ ಮತ್ತು ವಿಲ್ಲುಪುರಂ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ತಡೆರಹಿತ ಭಾರೀ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯುವ ನಿರೀಕ್ಷೆ ಇದೆ. ನವೆಂಬರ್ 11 ರ ಸಂಜೆ ವೇಳೆಗೆ ಹವಾಮಾನ ವ್ಯವಸ್ಥೆಯು ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನ ವಿವಿಧ ಭಾಗಗಳಲ್ಲಿ, ವಿಶೇಷವಾಗಿ ಉತ್ತರದ ಜಿಲ್ಲೆಗಳಲ್ಲಿ ಬುಧವಾರ ಸಂಜೆ ಭಾರೀ ಮಳೆಯಾಗಿದೆ. “ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗಿದೆ.

ರಾತ್ರಿ 8 ಗಂಟೆಯ ನಂತರ ವಿಶೇಷವಾಗಿ ಉತ್ತರ ಪ್ರದೇಶಗಳಲ್ಲಿ ಮಳೆ ತೀವ್ರಗೊಂಡಿದೆ” ಎಂದು ಹವಾಮಾನ ಇಲಾಖೆಯ ಅಧಿಕಾರಿಯೊಬ್ಬರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ನವೆಂಬರ್ 11 ರ ಸಂಜೆಯ ವೇಳೆಗೆ ಹವಾಮಾನ ವ್ಯವಸ್ಥೆಯು ಉತ್ತರ ತಮಿಳುನಾಡು ಮತ್ತು ಪಕ್ಕದ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಕಾರೈಕಲ್ ಮತ್ತು ಶ್ರೀಹರಿಕೋಟಾ ನಡುವೆ, ಪುದುಚೇರಿಯ ಉತ್ತರಕ್ಕೆ ಸಮೀಪದಲ್ಲಿ ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇನ್ನೂ ಮಳೆ ತರಿಸುವ ಮೋಡಗಳು ಚೆನ್ನೈನಿಂದ ಪೂರ್ವ-ಆಗ್ನೇಯಕ್ಕೆ 430 ಕಿಲೋಮೀಟರ್ ಮತ್ತು ಪುದುಚೇರಿಯ ಪೂರ್ವ-ಆಗ್ನೇಯಕ್ಕೆ 420 ಕಿಮೀ ದೂರದಲ್ಲಿದ್ದು ಇದು ನವೆಂಬರ್ 11 ರ ಮುಂಜಾನೆ ಪಶ್ಚಿಮ ವಾಯವ್ಯ ದಿಕ್ಕಿನಲ್ಲಿ ಚಲಿಸಿ ಮತ್ತು ಉತ್ತರ ತಮಿಳುನಾಡು ಕರಾವಳಿಯ ಬಳಿ ತಲುಪುವ ಸಾಧ್ಯತೆಯಿದೆ.

ನಂತರ ನವೆಂಬರ್ 11 ರ ಸಂಜೆಯ ವೇಳೆಗೆ ಇದು ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ವಾಯುಭಾರ ಕುಸಿತದ ಪರಿಣಾಮವಾಗಿ ತಮಿಳುನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ನಿರ್ದಿಷ್ಟ ಪ್ರದೇಶಗಳಲ್ಲಿ ಅತ್ಯಂತ ಮತ್ತು ಹೆಚ್ಚಿನ ಇತರ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವುದು ಎಂದು ನಿರೀಕ್ಷಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap