ಬೆಂಗಳೂರು:
ರಾಜ್ಯದಲ್ಲಿ ಇಂದು ಸಂಜೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರದಲ್ಲಿ ಭಾರೀ ಮಳೆ ಸಂಭವವಿದೆ ಎನ್ನಲಾಗಿದೆ.
ಗಣಿನಾಡು ಕೋಲಾರ ಹಾಗೂ ಬೆಂಗಳೂರು ಸೇರಿದಂತೆ ಹಲವೆಡೆಯಿಂದು ಮಳೆ ಅಬ್ಬರ ತೋರಿದ್ದು, ಜನರಲ್ಲಿ ಸಂತಸ ಮೂಡಿಸಿದೆ. ಭಾರೀ ಮಳೆಯಿಂದ ರಸ್ತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ