ದಕ್ಷಿಣ ಕನ್ನಡ :
ತೀವ್ರ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಅರಬ್ಬೀ ಸಮುದ್ರದಲ್ಲಿ ಕ್ಯಾರ್ ಚಂಡಮಾರುತ ಭೀತಿಯಿಂದ ಉಡುಪಿ ಜಿಲ್ಲಾ ಶಾಲೆ, ಕಾಲೇಜಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ರಜೆ ಘೋಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಮೌಖಿಕ ಆದೇಶ ಹೊರಡಿಸಿದ್ದಾರೆ.
ಕ್ಯಾರ್ ಚಂಡಮಾರುತವು ಭಾರತೀಯ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಭಾರೀ ಗಾಳಿ ಮಳೆಯಾಗುತ್ತಿದೆ. ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ವಿಸ್ತರಿಸಿದೆ. ಜನ ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ.
ಭಾರೀ ಗಾಳೀ ಮಳೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರಕಾರಿ , ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ಪೂರ್ವ ತರಗತಿಯವರೆಗೆ) ಇಂದು ಜಿಲ್ಲಾಧಿಕಾರಿ ಸಿಂಧು ರೂಪೇಶ್ ರಜೆ ಘೋಷಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
