ಹವಾಮಾನ ವರದಿ : ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ…!

ಬೆಂಗಳೂರು

      ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆ  ಸುರಿದಿದ್ದು, ಅನೇಕ ಅವಾಂತರಗಳು ಸಂಭವಿಸಿವೆ. ಮಳೆ ಸಂಬಂಧಿತ ಅವಘಡಗಳಲ್ಲಿ ರಾಜ್ಯದಾದ್ಯಂತ ನಾಲ್ವರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲೇ  ಮೂರು ಸಾವುಗಳು ಸಂಭವಿಸಿವೆ. ಸೋಮವಾರ ಬೆಳಗ್ಗೆಯಷ್ಟೇ ಬೆಂಗಳೂರಿನಲ್ಲಿ ಉದ್ಯೋಗಿಯೊಬ್ಬರನ್ನು ಬಲಿ ಪಡೆದಿದ್ದ ಮಳೆ, ರಾತ್ರಿ ಹೊತ್ತಿಗೆ ಮತ್ತಿಬ್ಬರನ್ನು ಬಲಿ ಪಡೆದಿದೆ. ಬಿಟಿಎಂ ಲೇಔಟ್​​ನ 2ನೇ ಹಂತದ ಎನ್ಎಸ್ ಪಾಳ್ಯದ ಮಧುವನ ಅಪಾರ್ಟ್​ಮೆಂಟ್ ಬೇಸ್​ಮೆಂಟ್​​​ನಲ್ಲಿ ದುರ್ಘಟನೆ ಸಂಭವಿಸಿದೆ. ಮಳೆಯಿಂದ ಬೇಸ್​ಮೆಂಟ್ ಜಲಾವೃತವಾಗಿತ್ತು. ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಕರೆಂಟ್​ ಶಾಕ್ ತಗುಲಿ ಅಪಾರ್ಟ್​ಮೆಂಟ್ ನಿವಾಸಿ ಮನೋಹರ ಕಾಮತ್ ಮತ್ತು ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ಮೃತಪಟ್ಟಿದ್ದಾರೆ.

     ಬೆಂಗಳೂರಿನಲ್ಲಿ 2 ಕಡೆ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಡಿಸಿಎಂ ಡಿಕೆ ಶಿವಕುಮಾರ್ ಪರಿಶೀಲನೆ ಮಾಡಿದ್ದಾರೆ. ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ಮಾತನಾಡಿದ ಅವರು, ಯಾರಿಗೆ ಪರಿಹಾರ ಕೊಡಬೇಕೋ ಅವರಿಗೆ ಕೊಡುತ್ತೇವೆ. ಉಳಿದುಕೊಳ್ಳಲು ಜಾಗದ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಕಳೆದ ವರ್ಷ ಉತ್ತರ ಕನ್ನಡ ಜಿಲ್ಲೆ ಶಿರೂರಿನಲ್ಲಿ ಭೂ ಕುಸಿತ ಉಂಟಾಗಿ, 11 ಜನ ಮೃತಪಟ್ಟಿದ್ದರು. ಆ ಈ ದುರಂತದಲ್ಲಿ ಅಂಕೋಲ ತಾಲೂಕಿನ ಉಳವರೆಯ ಈ ತಮ್ಮಣ್ಣಿಗೌಡ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು. ಅಂದು ಗುಡ್ಡ ಕುಸಿತದಲ್ಲಿ ಉಳವರೆಯ ತಮ್ಮಣ್ಣಿಗೌಡರ ಮನೆಯೂ ಧ್ವಂಸವಾಗಿತ್ತು. ಅಂದು ಮನೆಯಿಂದ ಹೊರಗೆ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದ ತಮ್ಮಣ್ಣಿ ಗೌಡ, ಸೋಮವಾರ ಸಿಡಿಲು ಬಡಿದು ಮೃತಪಟ್ಟಿದ್ದಾರೆ. 

      ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 

      ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ 22 ಜಿಲ್ಲೆಗಳಿಗೂ ಮೂರು ದಿನ ಮಳೆ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಮತ್ತು ನಾಡಿದ್ದು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ಇಂದು ಮತ್ತು ನಾಳೆ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ.

Recent Articles

spot_img

Related Stories

Share via
Copy link