ಕಿಶ್ತ್ವಾರ್‌ : ಸೇನಾ ಹೆಲಿಕಾಪ್ಟರ್‌ ಪತನ

ಕಿಶ್ತ್ವಾರ್
      ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಗುರುವಾರ ಭಾರತೀಯ ಸೇನೆಯ ಎಎಲ್‌ಎಚ್ ಧ್ರುವ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಭಾರತೀಯ ಸೇನೆಯ ಈ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
     ಕಿಶ್ತ್ವಾರ್ ಜಿಲ್ಲೆಯ ಮರ್ವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡ ಸ್ಥಿತಿಯಲ್ಲಿ ಪೈಲಟ್ ಮತ್ತು ಸಹ ಪೈಲಟ್ರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap