ಮಂಬೈ :
ಮಂಗಳವಾರ ಬೆಳಗ್ಗೆ ನಟಿ ಹೇಮಾ ಮಾಲಿನಿ ಅವರು ಪತಿ, ನಟ ಧರ್ಮೇಂದ್ರ ಅವರ ನಿಧನದ ಸುದ್ದಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿರುವ ಧರ್ಮೇಂದ್ರ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಇದೀಗ ನಟಿ ಕೆಲವು ಸುಳ್ಳು ಸುದ್ದಿ ವರದಿಗಳನ್ನು ಖಂಡಿಸಿದ್ದಾರೆ.
ಧರ್ಮೇಂದ್ರ (89) “ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ. ಈಗ ನಡೆಯುತ್ತಿರುವ ಘಟನೆಗಳು ಕ್ಷಮಿಸಲಾಗದವು! ಚಿಕಿತ್ಸೆಗೆ ಸ್ಪಂದಿಸುತ್ತಿರುವ ಮತ್ತು ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ಬಗ್ಗೆ ಜವಾಬ್ದಾರಿಯುತ ಚಾನೆಲ್ಗಳು ಸುಳ್ಳು ಸುದ್ದಿಗಳನ್ನು ಹೇಗೆ ಹರಡಬಹುದು? ಇದು ಅತ್ಯಂತ ಅಗೌರವ ಮತ್ತು ಬೇಜವಾಬ್ದಾರಿಯಾಗಿದೆ. ದಯವಿಟ್ಟು ಕುಟುಂಬಕ್ಕೆ ಮತ್ತು ಅದರ ಗೌಪ್ಯತೆಯ ಅಗತ್ಯಕ್ಕೆ ಸರಿಯಾದ ಗೌರವವನ್ನು ನೀಡಿ” ಎಂದು ಅವರು ಮೈಕ್ರೋಬ್ಲಾಗಿಂಗ್ ಸೈಟ್ನಲ್ಲಿ ಬರೆದಿದ್ದಾರೆ.
ಹೇಮಾ ಮಾಲಿನಿಯವರ ಈ ಹೇಳಿಕೆ ಅವರ ಮಗಳು ಇಶಾ ಡಿಯೋಲ್ ಅವರ ಹೇಳಿಕೆಯ ಬೆನ್ನಲ್ಲೇ ಬಂದಿದೆ. ಧರ್ಮೇಂದ್ರ ಮತ್ತು ಹೇಮಾ ಮಾಲಿನಿ (77) ಅವರ ಹಿರಿಯ ಪುತ್ರಿ ಇಶಾ ಡಿಯೋಲ್, ಇನ್ಸ್ಟಾಗ್ರಾಮ್ನಲ್ಲಿ ಹೇಳಿಕೆ ಹಂಚಿಕೊಂಡಿದ್ದು, ತನ್ನ ತಂದೆಯ ಸಾವಿನ ವರದಿಗಳನ್ನು ನಿರಾಕರಿಸಿದ್ದಾರೆ.
“ಮಾಧ್ಯಮಗಳು ಅತಿರೇಕದಲ್ಲಿದ್ದು ಸುಳ್ಳು ಸುದ್ದಿಗಳನ್ನು ಹರಡುತ್ತಿರುವಂತೆ ತೋರುತ್ತಿದೆ. ನನ್ನ ತಂದೆ ಸ್ಥಿರರಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಕುಟುಂಬದವರಿಗೆ ಗೌಪ್ಯತೆಯನ್ನು ನೀಡುವಂತೆ ನಾವು ಎಲ್ಲರಿಗೂ ವಿನಂತಿಸುತ್ತೇವೆ. ಅಪ್ಪನ ಶೀಘ್ರ ಚೇತರಿಕೆಗಾಗಿ ಪ್ರಾರ್ಥನೆಗಳಿಗೆ ಧನ್ಯವಾದಗಳು” ಎಂದು ಕಾಮೆಂಟ್ಗಳ ವಿಭಾಗ ಆಫ್ ಮಾಡಿ ಇಶಾ ಡಿಯೋಲ್ ಪೋಸ್ಟ್ ಹಂಚಿಕೊಂಡಿದ್ದಾರೆ
ನಿನ್ನೆ ರಾತ್ರಿಯೂ ಸಹ, ಹೇಮಾ ಮಾಲಿನಿ ಅವರು ಧರ್ಮೇಂದ್ರ ಅವರ ಆರೋಗ್ಯದ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದರು.ಧರಂ ಜಿ ಬಗ್ಗೆ ಕಾಳಜಿ ವಹಿಸಿದ್ದಕ್ಕಾಗಿ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಅವರ ಮೇಲೆ ನಿರಂತರ ನಿಗಾ ಇಡಲಾಗುತ್ತಿದೆ ಮತ್ತು ನಾವೆಲ್ಲರೂ ಅವರೊಂದಿಗೆ ಇದ್ದೇವೆ. ಅವರ ಯೋಗಕ್ಷೇಮ ಮತ್ತು ಶೀಘ್ರ ಚೇತರಿಕೆಗಾಗಿ ನೀವೆಲ್ಲರೂ ಪ್ರಾರ್ಥಿಸಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಅವರು ಬರೆದಿದ್ದರು.
ಸೋಮವಾರ ತಡರಾತ್ರಿ, ಧರ್ಮೇಂದ್ರ ಅವರ ಹಿರಿಯ ಪುತ್ರ ಸನ್ನಿ ಡಿಯೋಲ್ ಅವರ ಮೊದಲ ಪತ್ನಿ ಪ್ರಕಾಶ್ ಕೌರ್ ಅವರ ಹೇಳಿಕೆಯಲ್ಲಿ, “ಧರ್ಮೇಂದ್ರ ಸ್ಥಿರರಾಗಿದ್ದಾರೆ. ದಯವಿಟ್ಟು ಅವರ ಆರೋಗ್ಯದ ಬಗ್ಗೆ ಸುಳ್ಳು ವದಂತಿಗಳನ್ನು ಹರಡಬೇಡಿ. ಅವರ ಶೀಘ್ರ ಚೇತರಿಕೆಗಾಗಿ ಎಲ್ಲರೂ ಪ್ರಾರ್ಥಿಸುವಂತೆ ಮತ್ತು ಕುಟುಂಬದ ಗೌಪ್ಯತೆಯ ಹಕ್ಕನ್ನು ಗೌರವಿಸುವಂತೆ ವಿನಂತಿಸುತ್ತೇನೆ” ಎಂದು ಬರೆದುಕೊಂಡಿದ್ದರು .ಉಸಿರಾಟದ ತೊಂದರೆ ಕಾಣಿಸಿಕೊಂಡ ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಧರ್ಮೇಂದ್ರ ಅವರ ಅನಾರೋಗ್ಯದ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಸೋಮವಾರ ಸಂಜೆ ಹೇಮಾ ಮಾಲಿನಿ, ಸನ್ನಿ ಡಿಯೋಲ್, ಬಾಬಿ ಡಿಯೋಲ್ ಸೇರಿದಂತೆ ಅವರ ಕುಟುಂಬ ಸದಸ್ಯರು ಮತ್ತು ಚಲನಚಿತ್ರ ತಾರೆಯರಾದ ಸಲ್ಮಾನ್ ಖಾನ್, ಶಾರುಖ್ ಖಾನ್ ಮತ್ತು ಗೋವಿಂದ ಆಸ್ಪತ್ರೆಗೆ ಭೇಟಿ ನೀಡಿದರು.








