ಮೂರನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಹೇಮಂತ್‌ ಸೊರೆನ್‌ ….!

ರಾಂಚಿ:

    ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದರು. ಇಂದು ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಹೇಮಂತ್ ಸೊರೆನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಕೂಡ ಉಪಸ್ಥಿತರಿದ್ದರು.

    ಇದಕ್ಕೂ ಮುನ್ನ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಹೇಮಂತ್ ಸೊರೆನ್ ಅವರಿಗೆ ನೂತನ ಸರ್ಕಾರ ರಚಿಸಲು ಆಹ್ವಾನ ನೀಡಿದ್ದರು. ರಾಜ್ಯಪಾಲರಿಂದ ಆಹ್ವಾನ ಸ್ವೀಕರಿಸಿದ ನಂತರ ಸಾಮಾಜಿಕ ಮಾಧ್ಯಮ X ನಲ್ಲಿ ಸಂತೋಷ ವ್ಯಕ್ತಪಡಿಸಿದ ಹೇಮಂತ್ ಸೊರೆನ್ ಅವರ ಪತ್ನಿ ಮತ್ತು ಶಾಸಕಿ ಕಲ್ಪನಾ ಸೊರೆನ್, ಅಂತಿಮವಾಗಿ ಪ್ರಜಾಪ್ರಭುತ್ವವು ಗೆದ್ದಿದೆ ಎಂದು ಹೇಳಿದ್ದರು.

   “31 ಜನವರಿ 2024 ರಂದು ಪ್ರಾರಂಭವಾದ ಅನ್ಯಾಯವು ಈಗ ನಿಜವಾದ ಅರ್ಥದಲ್ಲಿ ನ್ಯಾಯವನ್ನು ಪಡೆಯುವ ಸಮಯ ಪ್ರಾರಂಭಿಸಿದೆ” ಎಂದು ಕಲ್ಪನಾ ಸೊರೆನ್ X ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಹೇಮಂತ್ ಸೊರೆನ್ ಬಂಧನದ ನಂತರ ಫೆಬ್ರವರಿ 2ರಂದು ಜಾರ್ಖಂಡ್‌ನ 12ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಚಂಪೈ ಸೊರೆನ್ ಅವರು ಬುಧವಾರ ರಾಜೀನಾಮೆ ನೀಡಿದ ನಂತರ ಜೆಎಂಎಂ ಮುಖ್ಯಸ್ಥ ಹೇಮಂತ್ ಸೋರೆನ್ ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.

Recent Articles

spot_img

Related Stories

Share via
Copy link
Powered by Social Snap