ಹೆಸ್ಕಾಂ ಹಗರಣ: ತನಿಖೆ ಚುರುಕು : ಎಂಡಿ ರೋಷನ್‌

ಹುಬ್ಬಳ್ಳಿ:

    ಅದು ಏಳು ಜಿಲ್ಲೆಯ ಜನಮನದಲ್ಲಿ ಬೆಳಕನ್ನು ಚಲ್ಲುವ ಹೆಸ್ಕಾಂ ಇಲಾಖೆ. ಈ ಇಲಾಖೆಯಲ್ಲಿಯೇ ಬೇಲಿಯೇ ಎದ್ದು ಹೊಲ ಮೆಯ್ದಿರುವ ಪ್ರಕರಣ ಬೆಳಕಿಗೆ ಬಂದಿದೆ. ಸುಳ್ಳು ದಾಖಲೆ ಸೃಷ್ಟಿಸಿ ಕರೆಂಟ್ ನೀಡುವ ಇಲಾಖೆಗೆ ಶಾಕ್ ಕೊಟ್ಟಿದ್ದಾರೆ. ಈ ಕುರಿತು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಮೊಹಮ್ಮದ್‌ ರೋಷನ್ ಗಂಭೀರವಾಗಿ ಪರಿಗಣಿಸಿದ್ದು ತ‌ನಿಖೆ ಚುರುಕು ಮಾಡಿದ್ದಾರೆ. ಈ ಕುರಿತು ಅವರು ಮಾಹಿತಿ ನೀಡಿದ್ದಾರೆ.

    ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ(ಹೆಸ್ಕಾಂ)ನ ಹುಬ್ಬಳ್ಳಿಯ ಉಗ್ರಾಣದಲ್ಲಿ ನಡೆದ ಬರೊಬ್ಬರಿ
51 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ(
ಹೆಸ್ಕಾಂ ) ಲೆಕ್ಕಾಧಿಕಾರಿ ಸೇರಿದಂತೆ ಐವರನ್ನು ಅಮಾನತು ಮಾಡಲಾಗಿದೆ. ಅಮಾನತು ಮಾಡಿ ಸಮಿತಿ ಮಾಡಿ ತನಿಖೆ ‌ಮಾಡಲಾಗುತಿದ್ದು ಯಾರು ಯಾರು ಈ ಹಗರಣದಲ್ಲಿ ಶಾಮೀಲು ಆಗಿದ್ದಾರೆ. ಇದೊಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಇತಿಹಾಸದಲ್ಲಿಯೇ ದೊಡ್ಡ ಪ್ರಕರಣ ಆಗಿದೆ. ಎಲ್ಲ ಆಯಾಮಗಳ ಮೇಲೆ ತನಿಖೆ ಮಾಡಲಾಗುತ್ತಿದೆ.

    ಯಾವ ಉಪಕರಣ ಕಳವು ಆಗಿದೆ‌. ಎಷ್ಟು ಸಾಮಾಗ್ರಿಗಳು ದುರುಪಯೋಗ ಆಗಿವೆ. ನಾವು ಉಗ್ರಾಣಗಳಲ್ಲಿ ಇರಿಸಿದ ಸಾಮಾಗ್ರಿಗಳ ಬಗ್ಗೆ ಸಹ ಲೆಕ್ಕ ಹಾಕಲಾಗುತಿದ್ದು ತನಿಖೆ ನಂತರ ಯಾರು ಇದರಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಶಾಮೀಲಾಗಿದ್ದಾರೆ ಎಷ್ಟೆಷ್ಟು ಹಣದ ಸಾಮಾಗ್ರಿಗಳು ಕಾಣೆಯಾಗಿವೆ ಎಂಬ ಬಗ್ಗೆ ಸಹ ಮಾಹಿತಿ ಪಡೆಯಲಾಗುತ್ತದೆ ಎಂದರು.

    ಲೆಕ್ಕಾಧಿಕಾರಿ ಬೆಂಜಮಿನ್‌ ಮಸ್ಕನರ್ಸ್‌, ಸಹಾಯಕ ಲೆಕ್ಕಾಧಿಕಾರಿ ಯು.ಎಸ್.ಉಳ್ಳಾಗಡ್ಡಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ವಿಶ್ವನಾಥ ಶಿರಹಟ್ಟಿಮಠ, ವಸಂತಕುಮಾರ ರಾಠೋಡ, ಅಂಜಿನಪ್ಪ ಬಿ., ಅಮಾನತು ಮಾಡಲಾಗಿದೆ. ಈ ಪ್ರಕರಣದ ಅವ್ಯವಹಾರದ ಕುರಿತು ತನಿಖೆ ನಡೆಸಲು ಐವರು ಅಧಿಕಾರಿಗಳ ತಂಡ ರಚಿಸಲಾಗಿತ್ತು.

    ತಂಡು ಮೂರು ವರ್ಷ ತನಿಖೆ ನಡೆಸಿ, ಮಧ್ಯಂತ ವರದಿ ಸಲ್ಲಿಸಿದ್ದು, ಅದರನ್ವಯ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಐವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಬಸವರಾಜ ಮಳಿಮಠ ಅವರು ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ 51,69,49,054 ಮೌಲ್ಯದ ಸಾಮಗ್ರಿಗಳನ್ನು ದುರುಪಯೋಗ ಪಡಿಸಿಕೊಂಡು, ಕಂಪನಿಗೆ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ನಿಟ್ಟಿನಲ್ಲಿ ಐವರನ್ನು ಅಮಾನತು ಮಾಡಿದ ನಂತರ ಪ್ರಭಾವ ಬೀರಬಾರದು ಎಂದು ಇಡೀ ಪ್ರಕರಣವನ್ನ ಗೌಪ್ಯವಾಗಿ ತನಿಖೆಗೆ ಸೂಚನೆ ನೀಡಲಾಗಿದೆ ಎಂದರು.

    ಇನ್ನೂ ಅಮಾನತುಗೊಂಡಿರುವ ಆರೋಪಿಗಳು ತಮ್ಮ ಅವಧಿಯಲ್ಲಿ ಹುಬ್ಬಳ್ಳಿ ನಗರ ವಿಭಾಗದ ಉಗ್ರಾಣದಿಂದ ಗ್ರಾಮೀಣ ವಿಭಾಗದ ಉಗ್ರಾಣಕ್ಕೆ ಭೌತಿಕವಾಗಿ ಸಾಮಗ್ರಿಗಳನ್ನು ವರ್ಗಾಯಿಸದೆ ಸಾಮಗ್ರಿಗಳನ್ನು ಮತ್ತು ಅದರ ಮೊತ್ತದಷ್ಟು ಸರಕು ಪಟ್ಟಿ, ಸುಳ್ಳು ದಾಖಲೆ ಸೃಷ್ಟಿಸಿ ಅದರ ಮೊತ್ತವನ್ನು ದುರುಪಯೋಗಪಡಿಸಿಕೊಂಡು, ಕರ್ತವ್ಯಲೋಪ ಎಸಗಿದ್ದಾರೆ ಎಂದು ತಿಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರಿಗೆ ಗೇಟ್ ಪಾಸ್ ಕೊಡಲಾಗಿದೆ. ಇನ್ನು ಯಾರು ಯಾರು ಶಾಮೀಲು ಆಗಿದ್ದಾರೆ ಅವರ ಬಗ್ಗೆ ಸಹ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು‌

    ಒಟ್ಟಿನಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೆಸ್ಕಾಂ ಇಲಾಖೆಯಲ್ಲಿಯೇ ಇಂತಹದೊಂದು ಬಹುದೊಡ್ಡ ಹಗರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸುವ ಕಾರ್ಯವನ್ನು ಮಾಡಬೇಕಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap