ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗ್ತಿದೆ. ವರುಣನ ಅಬ್ಬರಕ್ಕೆ ಕರಾವಳಿ ಮಂದಿ ಕಂಗಾಲಾಗಿದ್ದಾರೆ. ಮುಂಗಾರು ಪೂರ್ವ ಮಳೆಯೇ ಜನರ ಜೀವವನ್ನ ಹಿಂಡಿ ತಿನ್ನುತ್ತಿದೆ.
ತುಂತುರು ಮಳೆಗೆ ಶಾಲೆ ಕಾಂಪೌಂಡ್ ಕುಸಿದು ವಿದ್ಯಾರ್ಥಿನಿ ಸಾವನ್ನಪ್ಪಿರೋ ಘಟನೆ ದ.ಕ ಜಿಲ್ಲೆ ಉಳ್ಳಾಲ ತಾಲೂಕಿ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಶಾಲೆಯಲ್ಲಿ NSS ಶಿಬಿರದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ 7 ವರ್ಷದ ಶಾಜಿಯಾ ಗೇಟಿನ ಬಳಿ ಆಟವಾಡ್ತಿದ್ದಾಗ ಕಾಂಪೌಂಡ್ ಕುಸಿದು ಬಿದ್ದು ಅವಘಡ ನಡೆದಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನಲೆ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ. ಮಂಗಳೂರಿನಲ್ಲಿ ಇಂದು ಧಾರಾಕಾರ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ
ಕರಾವಳಿ ಜಿಲ್ಲೆ ಉಡುಪಿಯಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಉರಿ ಬಿಸಿಲಿನ ನಡುವೆ ಮೋಡದ ವಾತಾವರಣ ಇರೋದ್ರಿಂದ ಆದ್ರ್ರತೆ ಹೆಚ್ಚಾಗುತ್ತಿದೆ. ಕುಂದಾಪುರ ಬೈಂದೂರಿನಲ್ಲಿ 37ಸೆ. ಉಷ್ಣಾಂಶ ದಾಖಲಾಗಿದೆ. ಉಷ್ಣಾಂಶದ ನೇರ ಪರಿಣಾಮ ಕಡಲಿನ ಮೇಲೆ ಬಿದ್ದಿದ್ದು, ಸಮುದ್ರ ಪ್ರಕ್ಷ್ಯುಬ್ದವಾಗಿದೆ. ಈ ವಾರದಲ್ಲಿ ಗುಡುಗು ಸಿಡಿಲು ಮಳೆಯ ಮುನ್ನೆಚ್ಚರಿಕೆಯನ್ನ ಜಿಲ್ಲಾಡಳಿತ ನೀಡಿದೆ. ಭಾರೀ ಗಾತ್ರದ ಸಮುದ್ರದಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕಿಳಿಯಬಾರದು ಅಂತ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ