ಕೆಲವರಿಗೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಬುಲಾವ್….!

ನವದೆಹಲಿ

    ಕರ್ನಾಟಕ ಕಾಂಗ್ರೆಸ್​ನಲ್ಲಿ  ಕುರ್ಚಿ ಬದಲಾವಣೆ ಫೈಟ್ ಮತ್ತೊಂದು ರೂಪ ಪಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಎಚ್ಚರಿಕೆ ನೀಡಿದ ಬಳಿಕ ಬಹಿರಂಗವಾಗಿ ಮಾತನಾಡುತ್ತಿದ್ದ ನಾಯಕರು ಮೌನವಾಗಿದ್ದರು.‌ ಇದೀಗ ಹೈಕಮಾಂಡ್ ನಾಯಕರೇ  ಅಖಾಡಕ್ಕೆ ಇಳಿದು, ಸಚಿವರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಕಳೆದ ಎರಡು ದಿನಗಳಿಂದ ಒಬ್ಬೊಬ್ಬರೇ ಸಚಿವರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ರಾಜ್ಯ ವಿಧಾನಮಂಡಲ ಅಧಿವೇಶನದ ಮಧ್ಯೆಯೂ ಸಚಿವರು ದೆಹಲಿಯಲ್ಲಿ ಎಐಸಿಸಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ರನ್ನು ಭೇಟಿಯಾಗಿದ್ದಾರೆ‌.

    ದೆಹಲಿಯಾತ್ರೆ ಮಾಡುತ್ತಿರುವ ಸಚಿವರೆಲ್ಲರೂ ಪ್ರತ್ಯೇಕವಾಗಿಯೇ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮಂಗಳವಾರವಷ್ಟೇ ಆರೋಗ್ಯ ಸಚಿವ ದಿನೇಶ್ ಗುಡೂರಾವ್​ಗೆ ಬುಲಾವ್ ನೀಡಿದ್ದ ಕೆಸಿ ವೇಣುಗೋಪಾಲ್, ಎಐಸಿಸಿ ಕಚೇರಿಯಲ್ಲಿ ಮಾತುಕತೆ ನಡೆಸಿದ್ದರು. ಅದಾದ ಬಳಿಕ ಕಂದಾಯ ಸಚಿವ ಕೃಷ್ಣ ಭೈರೇಗೌಡರಿಗೆ ಬುಲಾವ್ ನೀಡಿ ಮಾತುಕತೆ ಮಾಡಿದ್ದಾರೆ. 

   ಸಚಿವರಾದ ಎಸ್ಎಸ್ ಮಲ್ಲಿಕಾರ್ಜುನ್, ಎಂಬಿ ಪಾಟೀಲ್‌ ಜೊತೆ ಬುಧವಾರ ಕೆಸಿ ವೇಣುಗೋಪಾಲ್ ಚರ್ಚೆ ನಡೆಸಿದ್ದಾರೆ. ಪಕ್ಷದಲ್ಲಿನ ಆಂತರಿಕ ಬೆಳವಣಿಗೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

Recent Articles

spot_img

Related Stories

Share via
Copy link