ಬೆಂಗಳೂರು:
ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇದ್ದು 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಕಾಂಗ್ರೆಸ್ ಚುನಾವಣಾ ಅಖಾಡಕ್ಕಿಳಿದಿದೆ.
ಕೋಲಾರದ ಕಾಂಗ್ರೆಸ್ ಅಭ್ಯರ್ಥಿ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡದೆ ಇನ್ನೂ ಕುತೂಹಲ ಮೂಡಿಸಿದೆ .ಈ ಮದ್ಯೆ ಸಿದ್ದರಾಮಯ್ಯ ಅವರು ವರುಣಾ ಜೊತೆಗೆ ಕೋಲಾರದಿಂದಲೂ ಸ್ಪರ್ಧಿಸುತ್ತಾರಾ ಅನ್ನೋ ಕುತೂಹಲ ಮುಂದುವರಿದಿದೆ.
ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈ ಕಮಾಂಡ್ ವರುಣಾ ಕ್ಷೇತ್ರದ ಟಿಕೆಟ್ ಘೋಷಿಸಿದೆ, ಈ ಮೊದಲು ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದರು, ಆದರೆ ಹೈಕಮಾಂಡ್ ಕೋಲಾರದಿಂದ ಸ್ಪರ್ಧಿಸದಂತೆ ಸಲಹೆ ನೀಡಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ವರುಣಾ ಮತ್ತು ಕೋಲಾರ ಎರಡು ಕಡೆ ಟಿಕೆಟ್ ಕೊಡುವಂತೆ ಹೈಕಮಾಂಡ್ಗೆ ಕೇಳಿದ್ದೇನೆ. ವರುಣಾದಲ್ಲಿ ನಿಲ್ಲುವಂತೆ ಹೈಕಮಾಂಡ್ನವರು ಹೇಳಿದ್ದಾರೆ. ಕೋಲಾರ ಕೂಡ ಕೇಳಿದ್ದೇನೆ. ಆದರೆ, ಹೈಕಮಾಂಡ್ ನಿರ್ಧಾರವೇ ಅಂತಿಮ’ ಸಿದ್ದರಾಮಯ್ಯ ಹೇಳಿದರು.ಮೊದಲ ಪಟ್ಟಿ ಬಿಡುಗಡೆಯಾಗಿದೆ. ಒಂದೇ ಹೆಸರು, ಗೊಂದಲ ಇಲ್ಲದ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ. ಸ್ಕ್ರೀನಿಂಗ್ ಹಾಗೂ ಸಿಇಸಿ ಸಭೆಯಲ್ಲಿ ಚರ್ಚೆ ನಡೆದು ಪಟ್ಟಿ ಬಿಡುಗಡೆ ಮಾಡಲಾಗಿದೆ’ ಎಂದರು.








