ಬೆಂಗಳೂರು :
ರಾಜ್ಯದ ಪ್ರತಿಯೊಂದು ಗ್ರಾಮದಲ್ಲೂ ಗೋಶಾಲೆ (Goshala) ಆರಂಭಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ (High Court) ಮೌಖಿಕವಾಗಿ ಸೂಚನೆ ನೀಡಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸಿದರೆ ಸಾಕಾಗುವುದಿಲ್ಲ.
ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲದೇ ಪ್ರತಿ ಗ್ರಾಮಮಟ್ಟದಲ್ಲಿಯೂ ಗೋ ಶಾಲೆ ತೆರೆಯಬೇಕು ಎಂದು ಸೂಚನೆ ನೀಡಿದೆ.
ಇನ್ನು ಮುಂದಿನ ವಿಚಾರಣೆ ವೇಳೆ ರಾಜ್ಯದಲ್ಲಿ ಗೋಶಾಲೆ ಆರಂಭಿಸಲು ಮತ್ತು ನಿರ್ವಹಣೆ ಮಾಡಲು ಯಾವ ಮಾರ್ಗಸೂಚಿ ರಚನೆ ಮಾಡಲಾಗಿದೆ ಎಂಬ ವಿವರಣೆ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ