ಬೆಳ್ತಂಗಡಿ ಶಾಸಕರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್…..!

ಬೆಂಗಳೂರು: 

   ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ರಾಜ್ಯ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಕೋರ್ಟ್ ಕೆಲಸವನ್ನು ನೀವು ಮಾಡಬೇಡಿ.

    ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

    ತಮ್ಮ ವಿರುದ್ಧ ದಾಖಲಾಗಿದ್ದ 2 FIRಗಳನ್ನು ಪ್ರಶ್ನಿಸಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಶಾಸಕರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಆದರೆ, ಜನಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ?, ಅಲ್ಲದೆ, ಶಾಸಕರು ಕಾನೂನು ಮಾಡುವ ಕೆಲಸವನ್ನು ಮಾಡಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸದಲ್ಲಿ ಮಾಡುವುದಕ್ಕೆ ಮುಂದಾಗುವುದು ಎಷ್ಟು ಸರಿ ಎಂದು ಪೀಠ ಪ್ರಶ್ನಿಸಿದೆ.

    ”ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿದ್ದಾರೆ, ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಮಾಡುವುದಕ್ಕೆ ಬಿಡಿ ಎಂದು ಪೀಠ ಸಲಹೆ ನೀಡಿತು. ಅಂತೆಯೇ ಪ್ರಸಕ್ತ ದಿನಗಳಲ್ಲಿ ಪೊಲೀಸ್ರ ವಿರುದ್ಧ ಧರಣಿ ಮಾಡುವುದು, ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸಾಮಾನ್ಯವಾಗಿದೆ. ಯಾವುದೋ ಒಂದು ಪ್ರಕರಣದಲ್ಲಿ ಪೊಲೀಸರಿಂದ ಒಬ್ಬರಿಗೆ ತೊಂದರೆ ಆಗಬಹುದು. ಆದರೆ, ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅವರು ಸೇವೆ ಸಲ್ಲಿಸುವುದಾದರೂ ಹೇಗೆ ಎಂದು ಪೀಠ ಇದೇ ವೆಳೆ ಪ್ರಶ್ನೆ ಮಾಡಿದೆ. 

ಈ ರೀತಿಯ ಪ್ರಕರಣದಲ್ಲಿ ಯಾವುದೇ ನ್ಯಾಯಾಲಯ ಆರೋಪಿತರ ಪರವಾಗಿ ಆದೇಶಿಸಿರುವ ಭಾರತದ ಯಾವುದೇ ನ್ಯಾಯಾಲಯದ, ವಿದೇಶ ನ್ಯಾಯಾಲಯಗಳು ಒಂದೇ ಒಂದು ಆದೇಶ ನೀಡಿರುವ ಉದಾಹರಣೆ ಇದಿಯೇ? ಇದ್ದರೆ ಸಲ್ಲಿಸಿ ಅದರ ಆಧಾರದಲ್ಲಿ ಮುಂದಿನ ವಿಚಾರಣೆ ನಡೆಸಿ ಆದೇಶಿಸಲಾಗುವುದು ಎಂದು ಪೀಠ ತಿಳಿಸಿತು.

ವಾದ ಆಲಿಸಿದ ಪೀಠ, ಸರಕಾರಕ್ಕೆ ನೋಟಿಸ್ ಜಾರಿ ಮಾಡಿತು. ಅಲ್ಲದೆ, ಮುಂದಿನ ವಿಚಾರಣೆಯವರೆಗೆ ಸಮಾಧಾನವಾಗಿರಿ. ಅರ್ಜಿದಾರರಿಗೆ ಯಾವುದೇ ತೊಂದರೆ ಮಾಡುವುದಕ್ಕೆ ಮುಂದಾಗಬೇಡಿ ಎಂದು ಸೂಚಿಸಿ ಕೋರ್ಟ್ ವಿಚಾರಣೆ ಮುಂದೂಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap