ಸಹಕಾರ ಸಂಘಗಳ ಕಾಯ್ದೆ : ತಿದ್ದುಪಡಿ ಸಾಂವಿಧಾನ ಬಾಹಿರ : ಹೈಕೋರ್ಟ್

ಬೆಂಗಳೂರು

   ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಸೆಕ್ಷನ್​ 128A ಪ್ರಕಾರ ಸಂವಿಧಾನಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ಪ್ರಮುಖ ಸಹಕಾರ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಮೀಸಲಾತಿ ಆಧಾರದ ಮೇಲೆ ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ಮಸೂದೆಯನ್ನು ಸಿದ್ದರಾಮಯ್ಯ ಸರ್ಕಾರ ಅಂಗೀಕರಿಸಿತ್ತು. ಆದ್ರೆ, ಇದೀಗ ಇದನ್ನು ಸಂವಿಧಾನಬಾಹಿರ. ತಿದ್ದುಪಡಿ ಸಂವಿಧಾನದ ಆರ್ಟಿಕಲ್ 19(1)ಸಿ ಉಲ್ಲಂಘನೆ ಎಂದು ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ ಅವರಿದ್ದ ಹೈಕೋರ್ಟ್ ಪೀಠ ತೀರ್ಪು ಪ್ರಕಟಿಸಿದೆ.

    ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಪ್ರಕರಣ 28 ಎ (3)ರ ಉಪ ಪ್ರಕರಣ (3)ರಲ್ಲಿ ಪ್ರಾಥಮಿಕ ಸಹಕಾರ ಸಂಘಗಳ ಮಂಡಳಿಯಲ್ಲಿ ಅನುಸೂಚಿತ ಜಾತಿಗಳು/ಅನುಸೂಚಿತ ಬುಡಕಟ್ಟುಗಳು, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರಿಗಾಗಿ ಈಗಾಗಲೇ ಮೀಸಲಾತಿ ಕಲ್ಪಿಸುವುದು. ಅದಕ್ಕನುಸಾರವಾಗಿ, ಮಾಧ್ಯಮಿಕ ಫೆಡರಲ್ ಮತ್ತು ಅಪೆಕ್ಸ್ ಸಹಕಾರ ಸಂಘಗಳ ಮಂಡಳಿಯಲ್ಲಿ ಪ್ರಾತಿನಿಧ್ಯ ಹೊಂದಿರದ ವರ್ಗದ ಅಥವಾ ಸಮುದಾಯದ ಜನರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸದುದ್ದೇಶದಿಂದ ಈ ತಿದ್ದುಪಡಿ ತರಲಾಗಿತ್ತು.

    ಸುದೀರ್ಘ ಚರ್ಚೆಯ ಬಳಿಕ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ-2024 ಅಂಗೀಕಾರವಾಗಿತ್ತು. ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಂಡಿಸಿದ್ದ ಬಿಲ್ ಇದಾಗಿತ್ತು. ನಿಯಮಗಳನ್ನು ‌ಮಾಡುವಾಗ ಕೆಲವೊಂದು ತಿದ್ದುಪಡಿ ಮಾಡುವಂತೆ ಸದನದಲ್ಲಿ ಸಲಹೆಗಳು ಕೇಳಿಬಂದವು. ಅದಕ್ಕೆ ಪ್ರತಿಕ್ರಿಯೆ ನೀಡಿದ ರಾಜಣ್ಣ, ಸಲಹೆಗಳೊಂದಿಗೆ ಪರಿಷ್ಕರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ವಿಧೇಯಕವನ್ನು ಅಂಗೀಕಾರ ಮಾಡಲಾಗಿತ್ತು.

    ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಸಹಕಾರ ಸಂಘಗಳ ತಿದ್ದುಪಡಿ ಮಸೂದೆಯನ್ನು ರಾಜ್ಯ ಸರ್ಕಾರ 2024 ಫೆಬ್ರವರಿ 20ರಂದು ವಿಧಾನಸಭೆಯಲ್ಲಿ ಅಂಗೀಕರಿಸಿದ್ದು, ಎಸ್‌ಸಿ/ಎಸ್‌ಟಿ ಸಮುದಾಯದಿಂದ ಒಬ್ಬರು, ಮಹಿಳೆ ಮತ್ತು ಸಾಮಾನ್ಯ ವರ್ಗದ ಒಬ್ಬರು ನಿರ್ದೇಶಕರಾಗಿರುತ್ತಾರೆ. ಈಗ 22 ಇರುವ ಅಪೆಕ್ಸ್ ಬ್ಯಾಂಕ್‌ನ ಆಡಳಿತ ಮಂಡಳಿಯ ಸಂಖ್ಯೆ ಇನ್ನುಮುಂದೆ 25ಕ್ಕೆ ಏರಲಿದ್ದು, ಪ್ರಮುಖ ನಿರ್ಧಾರ ತೆಗೆದುಕೊಳ್ಳುವಲ್ಲಿ ಸರ್ಕಾರ ಮೇಲುಗೈ ಸಾಧಿಸಿತ್ತು. ಆದ್ರೆ, ಇದೀಗ ಕೋರ್ಟ್​ ಈ ತಿದ್ದುಪಡಿ ಕಾಯ್ದೆಯನ್ನು ಸಂವಿಧಾನಬಾಹಿರ ಎಂದಿದೆ.

Recent Articles

spot_img

Related Stories

Share via
Copy link
Powered by Social Snap