ಹಣಕಾಸು ದುರ್ಬಳಕೆ : ತನಿಖೆಗೆ ತಡೆ ನೀಡಿದ ಹೈಕೋರ್ಟ್‌ …!

ಬೆಂಗಳೂರು:

    ಮೈಸೂರಿನಲ್ಲಿ ಕಳೆದ ವರ್ಷ ನಡೆದಿದ್ದ ರಾಜ್ಯ ವಕೀಲರ ಸಮ್ಮೇಳನದ ವೇಳೆ ಹಣಕಾಸು ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದಲ್ಲಿ ರಾಜ್ಯ ವಕೀಲರ ಪರಿಷತ್‌ (ಕೆಎಸ್‌ಬಿಸಿ) ಅಧ್ಯಕ್ಷರ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ.

   ರಾಜ್ಯ ವಕೀಲರ ಸಮ್ಮೇಳನದ ವೇಳೆ ಸುಮಾರು 50 ಲಕ್ಷಕ್ಕೂ ಹೆಚ್ಚಿನ ಮೊತ್ತದ ದುರುಪಯೋಗ ನಡೆದಿದೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ರಾಜ್ಯ ವಕೀಲರ ಪರಿಷತ್‌   ಅಧ್ಯಕ್ಷರ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ.

    ಇದೇ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಭಾರತೀಯ ವಕೀಲರ ಪರಿಷತ್‌ (ಬಿಸಿಐ) ರಚಿಸಿರುವ ಮೂವರು ಸದಸ್ಯರ ಸಮಿತಿಗೂ ಹೈಕೋರ್ಟ್‌ನ ಮತ್ತೊಂದು ಪೀಠ ತಡೆ ವಿಧಿಸಿದೆ

    ತಮ್ಮ ವಿರುದ್ದದ ತನಿಖೆ ವಜಾ ಮಾಡುವಂತೆ ಕೋರಿ ಕೆಎಸ್‌ಬಿಸಿ ಅಧ್ಯಕ್ಷ ಎಚ್‌ ಎಲ್‌ ವಿಶಾಲ್‌ ರಘು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಪೀಠ ಶುಕ್ರವಾರ ನಡೆಸಿತು. “ಅರ್ಜಿದಾರ ವಿಶಾಲ್‌ ರಘು ಕೋರಿಕೆಯಂತೆ ಪ್ರಕರಣಕ್ಕೆ ತಡೆಯಾಜ್ಞೆ ವಿಧಿಸಲಾಗಿದೆ. ಎರಡನೇ ಪ್ರತಿವಾದಿಯು ಆಕ್ಷೇಪಣೆ ಸಲ್ಲಿಸಿ, ಆದೇಶದಲ್ಲಿ ಮಾರ್ಪಾಡಿಗೆ ಕೋರಬಹುದಾಗಿದೆ. ರಾಜ್ಯ ಸರ್ಕಾರದ ಪರವಾಗಿ ಎಚ್‌ಸಿಜಿಪಿ ನೋಟಿಸ್‌ ಪಡೆದಿದ್ದಾರೆ” ಎಂದು ನ್ಯಾಯಾಲಯ ಆದೇಶಿಸಿದೆ. 

    ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಸ್ವೀಕರಿಸಿದ ದೂರಿನ ತನಿಖೆಗಾಗಿ ಮೂವರು ಸದಸ್ಯರ ಸಮಿತಿ ರಚಿಸಿ ಬಿಸಿಐ ಮಾಡಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ತಡೆಯಾಜ್ಞೆ ವಿಧಿಸಿದೆ. ಹಿರಿಯ ವಕೀಲ ಎಸ್‌ ಬಸವರಾಜು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಏಪ್ರಿಲ್‌ 12ರಂದು ಬಿಸಿಐ ಪ್ರಕರಣದ ತನಿಖೆಗಾಗಿ ಮೂವರು ಸಮಿತಿ ರಚಿಸಿ ಆದೇಶಿಸಿರುವುದು ಮತ್ತು ಮುಂದಿನ ಪ್ರಕ್ರಿಯೆಗೆ ತಡೆ ನೀಡಿದೆ.

    ಅಲ್ಲದೇ ಪ್ರತಿವಾದಿಗಳಾದ ಬಿಸಿಐ, ಕೆಎಸ್‌ಬಿಸಿ ಅಧ್ಯಕ್ಷ ಎಚ್‌ ಎಲ್ ವಿಶಾಲ್‌ ರಘು‌ ಮತ್ತು ಉಪಾಧ್ಯಕ್ಷ ವಿನಯ್‌ ಮಂಗಳೇಕರ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap