ಬೆಂಗಳೂರು
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಬಿಬಿಎಂಪಿ ಕಾಯ್ದೆ 2020ರಲ್ಲಿನ ವಿವಿಧ ಸೆಕ್ಷನ್‌ಗಳು ಸಂವಿಧಾನ ಆಶಯಗಳಿಗೆ ವಿರುದ್ಧವಾಗಿವೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಿಎಎಫ್ ಎಂಬ ಎನ್ ಜಿ ಓ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್. ಕಿಣಗಿ ಅವರಿದ್ದ ನ್ಯಾಯಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.
ನೂತನ ಕಾಯ್ದೆಯ ಸೆಕ್ಷನ್‌ಗಳಾದ 75,76, 77, 78, 79 ಮತ್ತು 86 ಈ ಆರೂ ಸೆಕ್ಷನ್ ಗಳು ಸಂವಿಧಾನದ ಮೂಲ ಆಶಯಗಳನ್ನು ಉಲ್ಲಂಘಿಸಿವೆ. ಹೀಗಾಗಿ ಕಾಯಿದೆಯನ್ನು ರದ್ದು ಮಾಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ರಾಜ್ಯ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯಿದೆಗೆ ತಂದಿತ್ತು. ಆದ್ದರಿಂದ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ.