ಬೆಂಗಳೂರು:
ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿಂದ ಕರ್ನಾಟಕಕ್ಕೆ ಸಂಬಂಧಿಸಿದಂತೆ ಹೈವೋಲ್ಟೇಜ್ ಸಭೆ ನಡೆಯಲಿದ್ದು, ಕರ್ನಾಟಕದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು ಭಾಗವಹಿಸುತ್ತಿರುವುದು ಸಭೆಯ ಹೈಲೈಟ್ ಆಗಿದೆ.
ಕೆಲವು ಶಾಸಕರು ತಮ್ಮ ಕ್ಷೇತ್ರಗಳಿಗೆ ಹಣದ ಕೊರತೆ ಮತ್ತು ಸಚಿವರ ಕಾರ್ಯವೈಖರಿ ಕುರಿತು ಸಿಎಂಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಸಭೆ ಮಹತ್ವ ಪಡೆದುಕೊಂಡಿದೆ. ಅಲ್ಲದೆ, ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಎಂಎಲ್‌ಸಿ ಬಿಕೆ ಹರಿಪ್ರಸಾದ್ ಅವರು ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಮಾಡಿರುವ ಟೀಕೆಗಳು ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿತ್ತು.
ಶಾಸಕರ ಅಸಮಾಧಾನಕ್ಕೆ ಮದ್ದು ಅರೆಯಲೆಂದು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಕಳೆದ ವಾರ ಬೆಂಗಳೂರಿನಲ್ಲಿ ಶಾಸಕಾಂಗ ಸಭೆ ಕರೆದಿದ್ದರು. ಈ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯನವರ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನದ ಮಾತುಗಳನ್ನಾಡಿರುವುದು ಸಹ ರಾಜಕೀಯವಾಗಿ ಭಾರೀ ಮಹತ್ವ ಪಡೆದುಕೊಂಡು ಚರ್ಚೆಯಾಗುತ್ತಿದೆ.
ಲೋಕಸಭಾ ಚುನಾವಣೆ ಸಿದ್ದತೆ, ಪಕ್ಷದ ಸಂಘಟನೆ ಹಾಗೂ ಇನ್ನಿತರ ವಿಚಾರವಾಗಿ ದೆಹಲಿಯಲ್ಲಿ ವರಿಷ್ಠರ ಜೊತೆಗೆ ಮೂರು ಹಂತದ ಸಭೆ ನಡೆಯಲಿದೆ. ದೆಹಲಿಗೆ ಹೋಗ್ತಿದ್ದೇನೆ. ದೆಹಲಿಯಲ್ಲಿ ಪಕ್ಷದ ಕೆಲಸ ಇದೆ, ಸರ್ಕಾರದ ಕೆಲಸ ಇದೆ. ಲೋಕಸಭೆ, ಪಕ್ಷದ ಹಿತದೃಷ್ಟಿಯಿಂದ ಹೋಗುತ್ತಿದ್ದೇವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ